ಬೆಂಗಳೂರು: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ಸನ್ನಿಧಿಗೆ ವಿಧಾನ ಪರಿಷತ್ ಶಾಸಕರಾದ ಟಿ.ಎ,ಶರವಣ ಅವರು ಭೇಟಿ ನೀಡಿ ತಾಯಿಯ ದರ್ಶನ ಮಾಡಿದರು ಹಾಗೆ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಕೂಡ ಭೇಟಿ ನೀಡಿದರು.
ದೇವಾಲಯಕ್ಕೆ ಭೇಟಿ ನೀಡಿದ ಟಿ.ಎ,ಶರವಣ ಅವರನ್ನು ದೇವಾಲಯದ ಆಡಳಿತ ಮಂಡಳಿ ಗೌರವಿಸಿದೆ.ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ದಿನದ ಇಪ್ಪನ್ಕಾಲ್ಕು ಗಂಟೆಯೂ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಟಿ.ಎ,ಶರವಣ ದಂಪತಿ ಹಾಸನಾಂಬೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಈ ವೇಳೆ ರಾಜ್ಯದಲ್ಲಿ ಸುಭಿಕ್ಷವಾಗಿ ಮಳೆಯಾಗಿ, ರೈತಾಪಿ ವರ್ಗದವರ ಬಾಳಲ್ಲಿ ಬೆಳಕು ಮೂಡಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಹಾಸನ ಜಿಲ್ಲೆಯಲ್ಲಿರುವ ಹಾಸನಾಂಬ ದೇಗುಲದ ಬಾಗಿಲನ್ನು ವರ್ಷಕ್ಕೊಮ್ಮೆ ಮಾತ್ರ ತೆರೆಯಲಾಗುತ್ತದೆ.ಈ ಬಾರಿ 14 ದಿನಗಳ ಕಾಲ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ.
ಹಾಗೆ ನವೆಂಬರ್ 7ರಂದು ಮಾಜಿ ಸಿಎಂ ಕುಮಾರಸ್ವಾಮಿ ದಂಪತಿ ಕೂಡ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿದ್ದರು ಹಾಗೆ ಅದೇ ದಿನ ಸಿಎಂ ಸಿದ್ದರಾಮಯ್ಯ ಕೂಡ ಭೇಟಿ ನೀಡಿ ದೇವಿಯ ದರ್ಶನ ಪಡೆದರು.