ಬೆಂಗಳೂರು: ಭಾರತ ತಂಡವು ಸೌತ್ ಆಫ್ರಿಕಾವ ಹೀನಾಯ ಸೋಲಿಸುವ ಮೂಲಕ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಮುಡೆಗೇರಿಸಿಕೊಂಡಿದೆ. ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ 7 ರನ್ ಗಳ ಜಯ ಸಾಧಿಸಿದೆ. ಸಿಎಂ ಸಿದ್ದರಾಮಯ್ಯ, ಹೆಚ್ಡಿ ಕುಮಾರಸ್ವಾಮಿ ಸೇರಿದಂತೆ ಗಣ್ಯರು ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
Consuming Milk After Eating Fish: ಮೀನು ತಿಂದ್ಮೇಲೆ ತಪ್ಪಿಯೂ ಹಾಲು ಕುಡಿಯಬೇಡಿ..! ಯಾಕೆ ಗೊತ್ತಾ..?
ಅದರಲ್ಲೂ ದೆಹಲಿ ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯ ನಮಗೆ ಸಿಕ್ಕ ಕೊಂಚ ಬಿಡುವಿನ ಸಮಯದಲ್ಲೂ ಪಂದ್ಯ ವೀಕ್ಷಿಸಿದ್ದು ಸಂತಸವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಾರ್ಬಡೋಸ್ನಲ್ಲಿ ನಡೆದ ಫೈನಲ್ನಲ್ಲಿ ಟೀಂ ಇಂಡಿಯಾ ರೋಚಕ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನ ಭಾರತ ಮಣಿಸಿ ಕ್ರಿಕೆಟ್ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ.
ಈ ಮೂಲಕ ಎರಡನೇ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಭಾರತ ಹೊರಹೊಮ್ಮಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ತಮ್ಮ ದೆಹಲಿ ಪ್ರವಾಸದ ನಡುವೆಯೂ ಸಿಕ್ಕ ಕೊಂಚ ಸಮಯದಲ್ಲಿ ಪಂದ್ಯ ವೀಕ್ಷಿಸಿದ್ದು ಟ್ವಿಟರ್ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)