ಟಿ20 ವಿಶ್ವಕಪ್ ನಾಕೌಟ್ ಹಂತಕ್ಕೆ ಬಂದು ನಿಂತಿದೆ. 20 ತಂಡಗಳೊಂದಿಗೆ ಶುರುವಾದ ಟೂರ್ನಿಯು ಇದೀಗ 4 ತಂಡಗಳ ಕದನವಾಗಿ ಮಾರ್ಪಟ್ಟಿದೆ. ಅದರಂತೆ ನಾಕೌಟ್ ಹಂತದಲ್ಲಿ ಸೌತ್ ಆಫ್ರಿಕಾ, ಇಂಗ್ಲೆಂಡ್, ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಕಣಕ್ಕಿಳಿಯಲಿದೆ. ಸೂಪರ್ 8 ಹಂತದಲ್ಲಿ ಮೊದಲ ಗುಂಪಿನಲ್ಲಿ ಸ್ಥಾನ ಪಡೆದಿದ್ದ ಅಫಘಾನಿಸ್ತಾನ ತಂಡ ಆಡಿದ 3 ಪಂದ್ಯಗಳಲ್ಲಿ 1 ಸೋಲು ಮತ್ತು 2 ಜಯದೊಂದಿಗೆ ಅಂಕಪಟ್ಟಿಯ 2ನೇ ಸ್ಥಾನಿಯಾಗಿ ಸೆಮಿಫೈನಲ್ಗೆ ಅರ್ಹತೆ ಪಡೆದುಕೊಂಡಿದೆ.
ಹೀಗಾಗಿ ಜೂನ್ 26ರಂದು ಟ್ರಿನಿಡಾಡ್ನ ಟರೊಬಾದಲ್ಲಿರುವ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ 2ನೇ ಗುಂಪಿನ ಅಗ್ರಸ್ಥಾನ ದಕ್ಷಿಣ ಆಫ್ರಿಕಾ ಎದುರು ಸೆಮಿಫೈನಲ್ ಪಂದ್ಯವನ್ನು ಆಡಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಜೂನ್ 27ರಂದು ಬೆಳಗ್ಗೆ 6 ಗಂಟೆಗೆ ಶುರುವಾಗಲಿದೆ.
![Demo](https://ainlivenews.com/wp-content/uploads/2023/12/spoorthi-1.jpg)
2022ರಲ್ಲಿ ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆದ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಸೆಮಿಫೈನಲ್ ತಲುಪಿ ಇಂಗ್ಲೆಂಡ್ ಎದುರು 10 ವಿಕೆಟ್ಗಳ ಹೀನಾಯ ಸೋಲುಂಡಿತ್ತು. ಇದೀಗ ಜೋಸ್ ಬಟ್ಲರ್ ಸಾರಥ್ಯದ ಇಂಗ್ಲೆಂಡ್ ಎದುರು ರೋಹಿತ್ ಶರ್ಮಾ ಬಳಗಕ್ಕೆ ಮತ್ತೊಂದು ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯ ಆಡುವ ಅವಕಾಶ ಸಿಕ್ಕಿದ್ದು ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.
ಸೂಪರ್ 8 ಹಂತದಲ್ಲಿ 1ನೇ ಗುಂಪಿನಲ್ಲಿ ಆಡಿದ ಮೂರೂ ಪಂದ್ಯಗಳನ್ನು ಗೆದ್ದು ಅಗ್ರಸ್ಥಾನ ಪಡೆದ ಭಾರತ ತಂಡಕ್ಕೆ 2ನೇ ಗುಂಪಿನಲ್ಲಿ ದ್ವಿತೀಯ ಸ್ಥಾನ ಪಡೆದ ಇಂಗ್ಲೆಂಡ್ ತಂಡ ಸೆಮಿಫೈನಲ್ನಲ್ಲಿ ಎದುರಾಳಿಯಾಗಿದ್ದು, ಜೂನ್ 27ರಂದು ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆ ಆಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಜೂನ್ 27ರ ರಾತ್ರಿ 8 ಗಂಟೆಗೆ ಶುರುವಾಗಲಿದೆ.
ಇನ್ನು ಸತತ 7 ಜಯದೊಂದಿಗೆ ದಾಖಲೆ ನಿರ್ಮಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡ ಸೆಮಿಫೈನಲ್ ತಲುಪಿದೆ. ವೆಸ್ಟ್ ಇಂಡೀಸ್ ಎದುರು ಸೂಪರ್ 8 ಹಂತದಲ್ಲಿನ ತನ್ನ ಕೊನೇ ಪಂದ್ಯದಲ್ಲಿ 3 ವಿಕೆಟ್ಗಳ ಜಯ ದಾಖಲಿಸಿದ ದಕ್ಷಿಣ ಆಫ್ರಿಕಾ ತಂಡ 2014ರ ಬಳಿಕ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ತಲುಪಿದ ಸಾಧನೆ ಮಾಡಿದ್ದು,
ಚೊಚ್ಚಲ ಟ್ರೋಫಿ ಗೆಲುವಿನ ಲೆಕ್ಕಾಚಾರ ಹಾಕಿಕೊಂಡಿದೆ. ಟ್ರೋಫಿ ಗೆದ್ದು ತನಗೆ ಅಂಟಿರುವ ಚೋಕರ್ಸ್ ಹಣೆಪಟ್ಟಿಯನ್ನು ದಕ್ಷಿಣ ಆಫ್ರಿಕಾ ಕಳಚುವುದೇ? ಕಾದು ನೋಡಬೇಕು. ಅಂದಹಾಗೆ ಸೆಮಿಫೈನಲಗ್ ಪಂದ್ಯಗಳಿಗೆ ಮಳೆ ಅಡ್ಡಿಪಡಿಸಿದರೆ ಒಂದು ದಿನ ಹೆಚ್ಚುವರಿ ನಿಗದಿ ಪಡಿಸಲಾಗಿದೆ. ಹೀಗಾಗಿ ಯಾವುದೇ ಅಡ್ಡಿಯಿಲ್ಲದೆ ಪಂದ್ಯ ಆಯೋಜನೆ ಅಗಲಿದೆ ಎಂದೇ ನಿರೀಕ್ಷೆ ಮಾಡಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)