ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷಾಗಿ ಆಯ್ಕೆ ಆಗಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರಿಗೆ ವಿಧಾನಪರಿಷತ್ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಟಿಎ ಶರವಣ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಟಿಎ ಶರವಣ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿರುವ ಶಿಕಾರಿಪುರದ ಶಾಸಕರು ಆತ್ಮೀಯರಾದ ಸನ್ಮಾನ್ಯ ಶ್ರೀ ಬಿ ವೈ ವಿಜಯೇಂದ್ರ ರವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಪೋಸ್ಟ್ ಮಾಡಿದ್ದಾರೆ
ಇನ್ನೂ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ನೇಮಕವಾಗಿದ್ದಾರೆ. ಈ ಸಂಬಂಧ ಜೆಪಿ ನಡ್ಡಾ ಅವರು ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಈ ಮೂಲಕ ಲಿಂಗಾಯತ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಪಟ್ಟ ಒಲಿದಿದೆ. ಬಿಜೆಪಿಯಲ್ಲಿ ಮತ್ತೆ ಮಾಜಿ ಸಿಎಂ ಯಡಿಯೂರಪ್ಪ ಅಧಿಪತ್ಯ ಸಾಧಿಸಿದ್ದಾರೆ.