ಬೆಂಗಳೂರು:- ವಕೀಲ ದೇವರಾಜೇಗೌಡಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಹಳೇ ಕೇಸ್ಗಳು ರೀ ಓಪನ್ ಆಗಿವೆ.
ದೇವರಾಜೇಗೌಡ ವಿರುದ್ಧ ಚೀಟಿಂಗ್ ಕೇಸ್ ಸೇರಿದಂತೆ 5ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅತ್ಯಾಚಾರ ಪ್ರಕರಣ ಜೊತೆಗೆ ಹಳೇ ಪ್ರಕರಣಗಳ ತನಿಖೆಯೂ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದೇವರಾಜೇಗೌಡರನ್ನು ಎಸ್ಐಟಿ ಅಧಿಕಾರಿಗಳು ಸೋಮವಾರ (ಮೇ13) ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಮಾರ್ಚ್ 14 ರಂದು ದೇವರಾಜೇಗೌಡ ವಿರುದ್ಧ ಜಿಲ್ಲಾಧಿಕಾರಿ ಸತ್ಯಭಾಮ ಹಾಸನ ನಗರ ಠಾಣೆಯಲ್ಲಿ ದೂರು ದಾಖಲಸಿದ್ದರು. ಜಿಲ್ಲಾಧಿಕಾರಿಗಳ ದೂರು ಆಧರಿಸಿ ಹಾಸನ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ವಿಚಾರಣೆ ನಡೆಸಲಾಗಿತ್ತು. ನಂತರ ಮಾರ್ಚ್ 29 ರಂದು ವ್ಯಕ್ತಿಯೊಬ್ಬರಿಂದ ಹೊಳೆನರಸೀಪುರ ನಗರ ಠಾಣೆಯಲ್ಲಿ ಜಾತಿನಿಂದನೆ ಪ್ರಕರಣ ದಾಖಲಾಗಿದೆ. ಕರ್ತವ್ಯಕ್ಕೆ ಅಡ್ಡಿಣ ಜಾತಿ ನಿಂದನೆ, ಲೈಂಗಿಕ ಕಿರುಕುಳ, ಅತ್ಯಾಚಾರ ಆರೋಪ ಸೇರಿದಂತೆ ಹಲವು ಪ್ರಕರಣಗಳ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ