ಬೆಂಗಳೂರು:- ಬೈಕ್ ಟ್ಯಾಕ್ಸಿ ಚಾಲಕರಿಗೆ ಅಡ್ಡಿಪಡಿಸಿದರೆ ಕ್ರಮ ಕೈಗೊಳ್ಳಿ ಎಂದು ಗೃಹ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.
Breaking News: ಹೃದಯಾಘಾತದಿಂದ ಬಿಜೆಪಿ ಟಿಕೆಟ್ ವಂಚಿತ ಸಾವು!
ಬೈಕ್ ಟ್ಯಾಕ್ಸಿ ಚಾಲಕರಿಗೆ ಆಟೋ ಮತ್ತು ಟ್ಯಾಕ್ಸಿ ಚಾಲಕರಿಂದ ಹಲ್ಲೆ ಹಿನ್ನೆಲೆ ಬೈಕ್ ಟ್ಯಾಕ್ಸಿ ಚಾಲಕರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಬೈಕ್ ಟ್ಯಾಕ್ಸಿ ಚಾಲಕರ ವಿರುದ್ಧ ಕ್ರಮಕೈಗೊಳ್ಳದಂತೆ ಆದೇಶವಿದೆ.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಂಗಳೂರಿನ ಆಟೋ ಚಾಲಕರ ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ ನಡುವಿನ ಹಗ್ಗಜಗ್ಗಾಟ ಸರ್ಕಾರದ ತಲೆಬಿಸಿಯನ್ನು ಹೆಚ್ಚಿಸಿತ್ತು. ಒಂದೆಡೆ ರ್ಯಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು ಎಂದು ಬೆಂಗಳೂರು ಆಟೋ ಚಾಲಕರು ಸರ್ಕಾರವನ್ನು ಒತ್ತಾಯಿಸುತ್ತಿದ್ದರೆ, ಇನ್ನೊಂದೆಡೆ, ಆಟೋ ಚಾಲಕರ ದೌರ್ಜನ್ಯ ಖಂಡಿಸಿ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಧರಣಿ ನಡೆಸುವ ಮೂಲಕ ಆಟೋ ಚಾಲಕರಿಗೆ ಕೌಂಟರ್ ಕೊಟ್ಟಿದ್ದರು