ಮಂಡ್ಯ :- ರೈತರು ತೋಟಗಾರಿಕೆ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಸಬಲರಾಗಬೇಕು. ತೋಟಗಾರಿಕೆ ವಿಜ್ಞಾನಿಗಳು ಹಾಗೂ ಅಧಿಕಾರಿಗಳ ಸಲಹೆ ಪಡೆದು ತೆಂಗಿನ ಬೆಳೆಯನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡುವ ಮೂಲಕ ಫಸಲನ್ನು ಹೆಚ್ಚಿಸಿಕೊಳ್ಳಿ ಎಂದು ಶಾಸಕ ಕೆ.ಎಂ.ಉದಯ್ ಸಲಹೆ ನೀಡಿದರು.
ಮದ್ದೂರು ಪಟ್ಟಣದ ತೋಟಗಾರಿಕೆ ಇಲಾಖೆ ಕಛೇರಿ ಆವರಣದಲ್ಲಿ ರೈತರಿಗೆ ತೆಂಗಿನ ಸಸಿ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯ ರೈತರು ಕಬ್ಬು, ಭತ್ತ, ರಾಗಿ ಹಾಗೂ ರೇಷ್ಮೆ ಬೆಳೆಗಳ ಜತೆಗೆ ತೆಂಗು, ಮಾವು, ಸೀಬೆ, ಬಾಳೆ ಹಾಗೂ ಇನ್ನಿತರ ಬೆಳೆಗಳಿಗೆ ಹನಿ ನೀರಾವರಿ ಯೋಜನೆಯನ್ನು ಅಳವಡಿಸಿಕೊಂಡು ಲಾಭದಾಯಕ ಬೆಳೆಗಳನ್ನು ಬೆಳೆದರೆ ಆರ್ಥಿಕವಾಗಿ ಸಬಲರಾಗಬಹುದೆಂದು ರೈತರಿಗೆ ಕಿವಿಮಾತು ಹೇಳಿದರು.
ಮುಂದಿನ ದಿನಗಳಲ್ಲಿ 25 ಸಾವಿರಕ್ಕೂ ಹೆಚ್ಚು ತೆಂಗಿನ ಸಸಿಗಳನ್ನು ನೀಡಲಾಗುತ್ತಿದ್ದು, ರೈತರು ತೋಟಗಾರಿಕೆ ಕಛೇರಿಗೆ ದಾಖಲೆಗಳನ್ನು ನೀಡಿ ನೋಂದಾಯಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಇದೇ ವೇಳೆ ರಾಜ್ಯ ವಲಯದ ಉಪ ನಿರ್ದೇಶಕ ರಾಜು, ಹಿರಿಯ ಸಹಾಯಕ ನಿರ್ದೇಶಕಿ ರೇಖಾ, ತೋಟಗಾರಿಕೆ ಅಧಿಕಾರಿಗಳಾದ ಸಂಪತ್, ಪುರಸಭಾ ಸದಸ್ಯರಾದ ಸಚಿನ್, ಸಿದ್ದರಾಜು, ಗ್ರಾ.ಪಂ ಅಧ್ಯಕ್ಷ ತಿಮ್ಮೇಗೌಡ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್ ಮಂಡ್ಯ