ಕೊಪ್ಪಳ:- ಅರ್ಹ ಫಲಾನುಭವಿಗಳು ಕೇಂದ್ರ ಸರ್ಕಾರದ ಉಜ್ವಲ ಯೋಜನೆ ಸದುಪಯೋಗಪಡಿಸಿಕೊಂಡು ಸಬಲರಾಗಬೇಕು ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಉಜ್ವಲಯೋಜನೆಯಡಿ ಫಲಾನುಭವಿಗಳಿಗೆ ಗ್ಯಾಸ್ ಹಾಗೂ ಸಿಲಿಂಡರ್ ವಿತರಿಸಿ ಮಾತನಾಡಿದರು. ಮುದ್ರಾ, ಜನಧನ್, ಪಿ.ಎಂ.ವಿಶ್ವಕರ್ಮ, ಉಜ್ವಲ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಎಲ್ಇಡಿ ವಾಹನಗಳ ಮೂಲಕ ಎಲ್ಲ ಗ್ರಾಪಂ ಹಾಗೂ ನಗರ ಪ್ರದೇಶದ ವಾರ್ಡ್ಗಳಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುವ ಮೂಲಕ ಯೋಜನೆಗಳ ಲಾಭ ಪಡೆದ ಫಲಾನುಭವಿಗಳನ್ನು ಒಗ್ಗೂಡಿಸಬೇಕು.
ಈ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳಿಗೆ ಅದರ ಲಾಭ ಸಿಗುವಂತೆ ಮಾಡುವ ಈ ಕಾರ್ಯಕ್ರಮ ಅಧಿಕಾರಿಗಳು ಯಶಸ್ವಿಗೊಳಿಸಬೇಕು ಎಂದರು. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹಿಂದುಳಿದ, ದಲಿತ, ಅಲ್ಪಸಂಖ್ಯಾತ ವರ್ಗಗಳ ಅಭಿವೃದ್ಧಿಗೆ ಪೂರಕವಾಗುವ ಯೋಜನೆ ಜಾರಿಗೊಳಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಂತೆ ಒಂದು ವರ್ಗದ ತುಷ್ಠಿಕರಣಕ್ಕೆ ಸೀಮಿತವಾಗಿಲ್ಲ. ಜನರ ಅಭಿವೃದ್ಧಿಯಿಂದ ಮಾತ್ರ ದೇಶ ಅಭಿವೃದ್ಧಿ ಎಂಬ ಸಂಕಲ್ಪದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.