ಬೆಂಗಳೂರು: ಕಾನೂನು ಕೈಗೆ ತೆಗೆದುಕೊಳ್ಳುವುದು ಸಿದ್ದರಾಮಯ್ಯಗೆ ಶೋಭೆ ತರಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿದ ಅವರು, ಕಾನೂನು ಕೈಗೆ ತೆಗೆದುಕೊಳ್ಳುವುದು ಸಿದ್ದರಾಮಯ್ಯಗೆ ಶೋಭೆ ತರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಮುನಿರತ್ನ ವಿರುದ್ಧ ಆರೋಪ ಇದೆ. ಕಾನೂನು ಕ್ರಮಗಳು ನಡೆಯುತ್ತಿವೆ. ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನ ಆಚರಣೆ ಕಾರ್ಯಕ್ರಮ ನಡೆಸುತ್ತಿದ್ದರು. ಆದರೆ ಅವರ ಮೇಲೆ ಮೊಟ್ಟೆ ಎಸೆಯಲಾಗಿದೆ. ಕಾನೂನು ಕೈಗೆ ತೆಗೆದುಕೊಳ್ಳುವುದು ಸರಿಯಲ್ಲ ಎಂದರು.