ದಾವಣಗೆರೆ:- ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡೋ ನೈತಿಕತೆ ಬಿಜೆಪಿಗಿಲ್ಲ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಕಾಂಗ್ರೆಸ್ ಗೆ ಹಿಂದೂಗಳೇ ಟಾರ್ಗೆಟ್, ಅದಕ್ಕೆ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗ್ತಿದೆ: ಯತ್ನಾಳ್!
ಈ ಸಂಬಂಧ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಲೂಟಿ ಮಾಡಿದ್ದಾರೆ. ಈ ವೇಳೆ ಕೋವಿಡ್ ಕಾಲದಲ್ಲಿ ಯಂತ್ರೋಪಕರಣಗಳನ್ನು ಖರೀದಿ ಮಾಡದೇ ಹಣ ತಿಂದು ಹಾಕಿದ್ದಾರೆ. ಆಗ ಬಿಜೆಪಿ ಮಾಡಿದ ಅವ್ಯವಹಾರ ಈಗ ಬೆಳಕಿಗೆ ಬರುತ್ತಿವೆ ಎಂದಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರಕ್ಕೆ ಕೋವಿಡ್ ಕಾಲದಲ್ಲಿ ಎಲ್ಲರಿಗೂ ಲಸಿಕೆ ಕೊಡಲು ಆಗಿಲ್ಲ. ನಾವು ನಮ್ಮ ಕುಟುಂಬದಿಂದ 6 ಕೋಟಿ ರೂ. ವೆಚ್ಚದಲ್ಲಿ ಕೋವಿಡ್ ಲಸಿಕೆ ವಿತರಿಸಿದ್ದೆವು. ಇದೇ ಕಾರಣಕ್ಕೆ 40% ಭ್ರಷ್ಟಚಾರ ಎಂದು ನಾವು ಬಿಜೆಪಿ ಸರ್ಕಾರವನ್ನ ಕರೆದಿದ್ದೆವು. ಈಗ ನಮ್ಮ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಬಿಜೆಪಿಗೆ ಯಾವ ನೈತಿಕತೆ ಇಲ್ಲಾ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.