ಬಾಗಲಕೋಟೆ;- ವಿರೋಧ ಮಾಡುವವರಿಗೂ ಜಾತಿ ಜನಗಣತಿ ವರದಿಯಲ್ಲೇನಿದೆ ಎಂದು ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಜಾತಿ ಜನಗಣತಿ ವರದಿ ಕುರಿತು ರಾಜ್ಯದಲ್ಲಿ ಶುರುವಾಗಿರುವ ಟೀಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಕಿಡಿಕಾರಿದ್ದಾರೆ. ಜಾತಿ ಗಣತಿ ವರದಿ ಸಲ್ಲಿಕೆಯಾಗುವ ಮೊದಲೇ ಅದರ ಕುರಿತು ರಾಜ್ಯದಲ್ಲಿ ಚರ್ಚೆ ಶುರುವಾಗಿದೆ. ವರದಿಯಲ್ಲೇನಿದೆ ಎಂಬುದು ಅದನ್ನು ಬೇಡ ಎನ್ನುತ್ತಿರುವವರಿಗೂ ಗೊತ್ತಿಲ್ಲ.
ಸುಮ್ಮನೆ ಊಹೆಯ ಮೇಲೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ವಿಚಾರವಾಗಿ ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ.
ಹಾಗಾಗಿ ಅದರ ಕುರಿತು ವರದಿ ಸಲ್ಲಿಕೆಯಾದ ನಂತರ ಮಾತನಾಡೋಣ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಇದೇ ವೇಳೆ ಜಾತಿ ಜನಗಣತಿ ಸಮಾಜವನ್ನು ಒಡೆಯುತ್ತದೆ ಎಂದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅವರಿಗೆ ವರದಿಯಲ್ಲಿ ಏನಿದೆ ಎಂಬುದು ಗೊತ್ತಿದೆಯೇ? ಯಾರೇ ಆಗಲಿ ವಿಷಯ ಗೊತ್ತಿಲ್ಲದೆ ಮಾತನಾಡಬಾರದು ಎಂದರು.