ಕಲಬುರಗಿಯಲ್ಲಿ ತಲವಾರ್ ಪಾಲಿಟಿಕ್ಸ್ ಜೋರಾಗಿದೆ. ಬಿಜೆಪಿ ಮಾಜಿ ಶಾಸಕರ ಸಹೋದರ ತಲ್ವಾರ ಹಿಡಿದ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಟೋ ರಿಲೀಸ್ ಮಾಡಿ ಪ್ರಿಯಾಂಕ್ ಖರ್ಗೆ ಬಿಜೆಪಿ ಕಾಲೆಳೆದಿದ್ದಾರೆ. ಬಿಜೆಪಿಯ ಮಾಜಿ ಶಾಸಕ ರಾಜ್ ಕುಮಾರ್ ಪಾಟೀಲ್ ತೇಲ್ಕೂರ್ ಅವರ ಸಹೋದರ ಜಿಬಿ ಪಾಟೀಲ್ ಅವರು ತಲ್ವಾರ್ನಿಂದ ಕೇಕ್ ಕತ್ತರಿಸಿದ ವಿಡಿಯೋ ಹಂಚಿಕೊಂಡ ಖರ್ಗೆ ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಬಿಜೆಪಿಯ ಮಾಜಿ ಶಾಸಕ ರಾಜ್ ಕುಮಾರ್ ಪಾಟೀಲ್ ತೇಲ್ಕೂರ್ ಅವರ ಸಹೋದರ ಜಿಬಿ ಪಾಟೀಲ್ ಅವರು ತಲ್ವಾರ್ನಿಂದ ಕೇಕ್ ಕತ್ತರಿಸಿ ವಿಜೃಂಭಣೆ ನಡೆಸಿದ್ದಾರೆ. ಇದು ”ಕಲಬುರಗಿ ರಿಪಬ್ಲಿಕ್” ಮಾಡುವ ಪ್ರಯತ್ನವೇ? ಬಿಜೆಪಿಗರ ಪ್ರಚಾರ ಇದು ಗೂಂಡಾಗಿರಿಯ ವ್ಯಾಪ್ತಿಗೆ ಬರುವುದಿಲ್ಲವೇ? ಎಂದು ಪ್ರಶ್ನೆ ಮಾಡಿದ್ದರು.
Eye Care Tips: ಕಣ್ಣಿನ ರೆಪ್ಪೆಯಲ್ಲಾಗುವ ಕುರು ಸಮಸ್ಯೆಗೆ ಕಾರಣಗಳೇನು..? ಬಂದಾಗ ಏನು ಮಾಡಬೇಕು..? ಇಲ್ಲಿದೆ ಉತ್ತರ
ಡಾ ಅಂಬೇಡ್ಕರ್ ಅವರ ಫೋಟೋ ಕಾಲ ಕೆಳಗಿಟ್ಟುಕೊಂಡು ತಲ್ವಾರ್ ಹಿಡಿದು ಕೇಕೆ ಹಾಕುತ್ತಿರುವ ಬಿಜೆಪಿಗರು ಗೂಂಡಾಗಿರಿ ಪ್ರದರ್ಶಿಸಿರುವುದಲ್ಲದೆ ಬಾಬಾ ಸಾಹೇಬರ ಘನತೆಗೆ ಚ್ಯುತಿ ತಂದಿದ್ದಾರೆ. ಈ ಕೃತ್ಯಕ್ಕೆ ಬಿಜೆಪಿಯವರು ಸಮರ್ಥನೆ ಮಾಡಿಕೊಳ್ಳುತ್ತಾರಾ ಅಥವಾ ಇಂತಹ ಘೋರ ಅಪರಾಧ ಮಾಡಿದವರ ವಿರುದ್ಧ ಕ್ರಮ ಜರುಗಿಸುತ್ತಾರಾ?’ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದರು.
ಅಷ್ಟೇ ಯಾಕೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಹಾಗೂ ವಿಜಯೇಂದ್ರ ಅವರೇ ಯಾವಾಗ ಕಲಬುರ್ಗಿಗೆ ಬರುತ್ತೀರಿ ಎಂದು ಟ್ವೀಟ್ ಮೂಲಕ ಕಾಲೆಳೆದಿದ್ದರು. ಇದೀಗ ಪ್ರಿಯಾಂಕ್ ಖರ್ಗೆಗೆ ಬಿಜೆಪಿ ಮಾಜಿ ಶಾಸಕ ರಾಜಕುಮಾರ್ ತಿರುಗೇಟು ಕೊಟ್ಟಿದ್ದಾರೆ. ಪ್ರಿಯಾಂಕ ಖರ್ಗೆ ತಲ್ವಾರ್ ಹಿಡಿದ ಫೋಟೋ ರಿಲೀಸ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.