ತಮನ್ನಾ ಲಂಡನ್ ಗೆ ಹಾರಿದ್ದಾರೆ. ಹೊಸ ವರ್ಷವನ್ನು ಬರಮಾಡಿಕೊಳ್ಳಲು ಅವರು ಬಾಯ್ ಫ್ರೆಂಡ್ ಜೊತೆ ವಿಮಾನ ಏರಿದ್ದಾರೆ. ಲಂಡನ್ (London) ನಲ್ಲಿ ಸುತ್ತಾಡುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಜೊತೆಗೆ ಇತ್ತೀಚಿನ ದಿನಗಳಲ್ಲಿ ಈ ಜೋಡಿಯ ಸುತ್ತಾಟವೂ ಹೆಚ್ಚಾಗಿದೆ. ತಮನ್ನಾ (Tamannaah) ಮತ್ತು ಬಾಲಿವುಡ್ ನಟ ವಿಜಯ್ ವರ್ಮಾ (Vijay Varma) ಲವ್ವಿಡವ್ವಿ ವಿಚಾರ ಗುಟ್ಟಿನ ಸಂಗತಿಯೇನೂ ಅಲ್ಲ. ಇಬ್ಬರೂ ಒಟ್ಟೊಟ್ಟಿಗೆ ಪ್ರವಾಸ ಮಾಡುತ್ತಿದ್ದಾರೆ,
ಹಲವಾರು ಪ್ರಾಜೆಕ್ಟ್ ಗಳಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ. ಇದೀಗ ಈ ಜೋಡಿ ಹೊಸ ಜೀವನಕ್ಕೆ ಕಾಲಿಡಲು ನಿರ್ಧರಿಸಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ. 2024 ಫೆಬ್ರವರಿಯಲ್ಲಿ ಅವರು ಮದುವೆ (Marriage) ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮದುವೆ ವಿಚಾರವನ್ನು ಈ ಜೋಡಿ ಅಧಿಕೃತವಾಗಿ ಹೇಳದೇ ಇದ್ದರೂ, ಮಾಧ್ಯಮಗಳ ಜೊತೆ ಮಾತನಾಡಿರುವ ವಿಜಯ್ ವರ್ಮಾ,
‘ನನಗೆ ತಮನ್ನಾ ಮೇಲೆ ಮತ್ತಷ್ಟು ಪ್ರೀತಿಯಾಗಿದೆ (Love). ಹೆಚ್ಚೆಚ್ಚು ಪ್ರೀತಿ ಮೂಡುತ್ತಿದೆ’ ಎಂದು ಹೇಳುವ ಮೂಲಕ ತಮ್ಮಿಬ್ಬರ ನಡುವಿನ ಡೇಟಿಂಗ್ ಅನ್ನು ಖಚಿತ ಪಡಿಸಿದ್ದಾರೆ.