ಚೆನ್ನೈ: ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಅವರ ಪುತ್ರ ಉದಯನಿಧಿ ಅವರ ಸನಾತನ ಧರ್ಮದ ವಿರುದ್ಧದ ಹೇಳಿಕೆ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಈ ಬೆನ್ನಲ್ಲೇ ಸ್ಟಾಲಿನ್ ಪುತ್ರಿ ಸೆಂತಾಮರೈ ಸ್ಟಾಲಿನ್ (Senthamarai Stalin) ಅವರು ಮೈಲಾಡುತುರೈ (Mayiladuthurai) ಜಿಲ್ಲೆಯ ಸಿರ್ಕಾಜಿಯಲ್ಲಿರುವ (Sirkazhi) ಸತ್ತೈನಾಥರ್ (Sattainathar) ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ವಿಶೇಷ ದರ್ಶನ ಪಡೆದಿದ್ದಾರೆ.
ಸ್ಟಾಲಿನ್ ಪುತ್ರಿ ದೇವಾಲಯಕ್ಕೆ ಆಗಮಿಸಿದ ವೇಳೆ ಆಕೆಯನ್ನು ದೇವಸ್ಥಾನದ ಆಡಳಿತ ಮಂಡಳಿ ಸ್ವಾಗತಿಸಿತು. ಸೆಂತಾಮರೈ ಸ್ಟಾಲಿನ್ ಸ್ವಾಮಿ ಅಂಬಲ್ ಚಟ್ಟನಾಥರ್ ಮತ್ತು ಅಷ್ಟ ಭೈರವ ದೇಗುಲಗಳಿಗೆ ಭೇಟಿ ನೀಡಿದ್ದು, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸತ್ತೈನಾಥರ್ ದೇವಾಲಯವು ಬೆಟ್ಟದ ಮೇಲಿರುವ ದೇವಾಲಯವಾಗಿದ್ದು, ಮೂರು ಹಂತಗಳಲ್ಲಿ ಭಗವಾನ್ ಶಿವನಿಂದ ಸ್ತೋತ್ರಗಳನ್ನು ಪಡೆದಿದೆ ಎಂದು ನಂಬಲಾಗಿದೆ.

HDK ಒಂದೊಂದು ದಿನಕ್ಕೆ ಎಲ್ಲಿ ಬೇಕಾದರೂ ಸಂಬಂಧ ಬೆಳೆಸಿಕೊಳ್ಳಬಹುದು: ಡಿಕೆಶಿ ವ್ಯಂಗ್ಯ!
ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ (Udhayanidhi Stalin) ಸೆಪ್ಟೆಂಬರ್ 2 ರಂದು ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿ, ಸನಾತನ (Sanatana) ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅದನ್ನು ಮಾತ್ರ ರದ್ದುಗೊಳಿಸಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾವನ್ನು ವಿರೋಧಿಸಲು ಸಾಧ್ಯವಿಲ್ಲ. ನಾವು ಇದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

