ದೊಡ್ಡಬಳ್ಳಾಪುರ: ಮಾರುತಿ ಓಮ್ನಿ ಮತ್ತು ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ.
ಬೆಂಗಳೂರಿನ ಬಗಲುಗುಂಟೆ ನಿವಾಸಿ ಶಿವಕುಮಾರ್( 32 ) ಸಾವನ್ನಪ್ಪಿದ ವ್ಯಕ್ತಿಯಾಗಿದ್ದು,
ಅಂತರಾಮ್ (37) ಗಂಭೀರ ಗಾಯಗೊಂಡಿದ್ದು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.. ಸ್ಥಳಕ್ಕೆ 112 ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.