ದೊಡ್ಡಬಳ್ಳಾಪುರ: ಹೊಸಕೋಟೆ ದಾಬಸ್ ಪೇಟೆಯ ಹೆದ್ದಾರಿಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮೇಷ್ಟ್ರು ಮನೆ ಕ್ರಾಸ್ ಬಳಿ ಹೆದ್ದಾರಿ ಬದಿಯಲ್ಲಿ ಗಿಡಗಳಿಗೆ ನೀರು ಹಾಯಿಸುತ್ತಿದ್ದ ಟ್ಯಾಂಕರ್ʼಗೆ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.
ಚಳಿಗಾಲದಲ್ಲೇ ಏಕೆ ಜಾಸ್ತಿ ಸೆಕ್ಸ್ ಮಾಡಬೇಕು ಅನಿಸುತ್ತೆ ಗೊತ್ತಾ..? ಇದಕ್ಕೆ ಕಾರಣ ಇಲ್ಲಿದೆ ನೋಡಿ
ತ್ಯಾಮಗೋಂಡ್ಲು ಮೂಲದ ಕಾರ್ತಿಕ್ (30) ಗಂಭೀರ ಗಾಯಗೊಂಡ ಚಾಲಕನಾಗಿದ್ದು, ಹೆದ್ದಾರಿಯಲ್ಲಿ ಗಿಡಗಳಿಗೆ ನೀರು ಹಾಯಿಸುತ್ತಿದ್ದ ಸಂದರ್ಭದಲ್ಲಿ ದಾಬಸ್ ಪೇಟೆ ಕಡೆಯಿಂದ ಬಂದ ಟಾಟಾ ಏಸ್ ಗೂಡ್ಸ್ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಟಾಟಾ ಏಸ್ ಗೂಡ್ಸ್ ವಾಹನ ಚಾಲಕನಿಗೆ ಗಂಭೀರ ಗಾಯಗೊಂಡಿದ್ದು ಗಾಯಾಳು ಚಾಲಕನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.