ಸೊನ್ನೆ ಸುತ್ತುವುದರಲ್ಲಿ ಹಿಟ್ಮ್ಯಾನ್ಗೆ ಅಗ್ರಸ್ಥಾನ ಸಿಗಲೇಬೇಕು. ಇಂಡಿಯನ್ ಪ್ರೀಮಿಯರ್ ಲೀಗ್ ನ 17 ನೇ ಸೀಸನ್ ನಲ್ಲಿ ಆಡಿರುವ ಎರಡು ಪಂದ್ಯದಲ್ಲಿ ಸೋಲನ್ನು ಅನುಭವಿಸಿರುವ ಮುಂಬೈ ಇಂಡಿಯನ್ಸ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲೂ ಹಿನ್ನಡೆ ಅನುಭವಿಸಿದೆ.
ಗ್ಯಾರೆಂಟಿ ಬಗ್ಗೆ ಪಾಸಿಟಿವ್ ರೆಸ್ಪಾನ್ಸ್: ಗುಪ್ತಚರ ವರದಿ ನೋಡಿ ಸಿಎಂ ಸಿದ್ದು ಖುಷ್!
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಮುಂಬೈ ತಂಡಕ್ಕೆ ವೇಗಿ ಟ್ರೆಂಟ್ ಬೌಲ್ಟ್ ಆರಂಭದಲ್ಲೇ ಬ್ಯಾಕ್ ಟು ಬ್ಯಾಕ್ ಆಘಾತ ನೀಡಿದರು. ಮೊದಲ ಓವರ್ನಲ್ಲೇ ನಾಯಕ ರೋಹಿತ್ ಶರ್ಮಾ ಹಾಗೂ ನಮನ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು
ಆ ಬಳಿಕ ನಾಲ್ಕನೇ ಕ್ರಮಾಂಕದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ರೂಪದಲ್ಲಿ ಬಂದ ಡೆವಾಲ್ಡ್ ಬ್ರೆವಿಸ್ ಕೂಡ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಮುಂಬೈನ ಟಾಪ್ ಮೂವರು ಬ್ಯಾಟರ್ಗಳು ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು. ಇದರಲ್ಲಿ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಸೊನ್ನೆಗೆ ಔಟಾಗುವ ಮೂಲಕ ಐಪಿಎಲ್ನಲ್ಲಿ ಬೇಡದ ದಾಖಲೆಯೊಂದನ್ನು ಬರೆದಿದ್ದಾರೆ
ಈ ಪಂದ್ಯದಲ್ಲಿ ರೋಹಿತ್ ಶರ್ಮಾ ತಾವು ಎದುರಿಸಿದ ಮೊದಲ ಎಸೆತದಲ್ಲೇ ಔಟಾದರು. ಈ ಮೂಲಕ ರೋಹಿತ್ ಐಪಿಎಲ್ನಲ್ಲಿ ಅತಿ ಹೆಚ್ಚು ಗೋಲ್ಡನ್ ಡಕ್ಗಳಿಗೆ ಔಟಾದ ನಾಚಿಕೆಗೇಡಿನ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.