ಗಯಾನಾದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 68 ರನ್ಗಳ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದೆ. ಈ ಫೈನಲ್ ಎಂಟ್ರಿಯೊಂದಿಗೆ ಭಾರತ ತಂಡವು ವಿಶೇಷ ವಿಶ್ವ ದಾಖಲೆಯನ್ನು ನಿರ್ಮಿಸಿದೆ.
Murder Case: ದರ್ಶನ್ ಭೇಟಿಗಾಗಿ ಜೈಲಿಗೆ ಬರ್ತಾರಾ ತಾಯಿ, ಸಹೋದರ?
ಐಸಿಸಿ ಟೂರ್ನಿಗಳಲ್ಲಿ ಅತೀ ಹೆಚ್ಚು ಬಾರಿ ಫೈನಲ್ ಆಡಿದ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿದೆ. ಆಸೀಸ್ ಪಡೆಯು ಐಸಿಸಿ ಟೂರ್ನಿಗಳಲ್ಲಿ ಒಟ್ಟು 13 ಬಾರಿ ಫೈನಲ್ ಆಡಿದೆ. ಇದೀಗ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ.
ಏಕದಿನ ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ, ವಿಶ್ವ ಟೆಸ್ಟ್ ಚಾಂಪಿಯನ್ಸ್ ಮತ್ತು ಟಿ20 ವಿಶ್ವಕಪ್ಗಳಲ್ಲಿ ಒಟ್ಟು 12 ಬಾರಿ ಫೈನಲ್ ಆಡಿರುವ ಟೀಮ್ ಇಂಡಿಯಾ ಇದೀಗ 13ನೇ ಬಾರಿಗೆ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದೆ. ಈ ಮೂಲಕ 13 ಬಾರಿ ಐಸಿಸಿ ಫೈನಲ್ ಆಡಿರುವ ಆಸ್ಟ್ರೇಲಿಯಾ ತಂಡದ ದಾಖಲೆಯನ್ನು ಟೀಮ್ ಇಂಡಿಯಾ ಸರಿಗಟ್ಟಿದೆ