ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ನಲ್ಲಿ ಟೀಂ ಇಂಡಿಯಾಗೆ 322 ರನ್ಗಳ ಮುನ್ನಡೆ ಸಾಧಿಸಿದೆ.
ಯಶಸ್ವಿ ಜೈಸ್ವಾಲ್ ಶತಕದ ನೆರವಿನಿಂದ ಟೀಂ ಇಂಡಿಯಾ ಮೂರನೇ ದಿನದಾಟದ ಅಂತ್ಯಕ್ಕೆ 322 ರನ್ಗಳ ಮುನ್ನಡೆ ಸಾಧಿಸಿದೆ.
3ನೇ ದಿನದಾಟದ ಅಂತ್ಯಕ್ಕೆ ಭಾರತ ಎರಡನೇ ಇನ್ನಿಂಗ್ಸ್ನಲ್ಲಿ 2 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿದೆ. ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ 19 ರನ್ ಗಳಿಸಿ ಔಟಾದರು. ನಂತರ ಜೈಸ್ವಾಲ್ ಮತ್ತು ಶುಭಮನ್ ಗಿಲ್ (Shubman Gill) ಉತ್ತಮ ಜೊತೆಯಾಟವಾಡಿದರು
ಜೈಶ್ವಾಲ್ 103 (133 ಬಾಲ್, 5 ಸಿಕ್ಸರ್, 9 ಫೋರ್) ಸಿಡಿಸಿ ಮಿಂಚಿದರು. ಆಟದ ವೇಳೆ ಬೆನ್ನು ನೋವಿನ ಸಮಸ್ಯೆಯಿಂದ ರಿಟೈರ್ಡ್ ಹರ್ಟ್ ಆಗಿ ಹೊರನಡೆದರು. ರಜತ್ ಪಾಟಿದಾರ್ ಶೂನ್ಯಕ್ಕೆ ಔಟಾದರು. ಶುಭಮನ್ ಗಿಲ್ ಅರ್ಧಶತಕ ಬಾರಿಸಿ (64) ಆಟವಾಡುತ್ತಿದ್ದಾರೆ.