ರೆಡ್ ಬಾಲ್ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾದ ಅಭಿಯಾನ ಸೆಪ್ಟೆಂಬರ್ 19ರಂದು ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಟೆಸ್ಟ್ ಕ್ರಿಕೆಟ್ ಸರಣಿ ಮೂಲಕ ಶುರುವಾಗಲಿದ್ದು, ಇದರ ಬೆನ್ನಲ್ಲೇ ತಾಯ್ನಾಡಿನಲ್ಲಿ ಪ್ರವಾಸಿ ನ್ಯೂಜಿಲೆಂಡ್ ಎದುರು 3 ಪಂದ್ಯಗಳ ಸರಣಿಯಲ್ಲಿ ಕಾದಾಟ ನಡೆಸಲಿದೆ.
ಬಯಲಾಗ್ತಿದೆ ದರ್ಶನ್ ಕ್ರೌರ್ಯದ ಭಯಾನಕ ಸತ್ಯಗಳು: ರೇಣುಕಾಸ್ವಾಮಿ ಎಡಗಣ್ಣಿಗೆ ಏಟು ಬಿದ್ದಿದ್ದು ಹೇಗೆ ಗೊತ್ತಾ..?
ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಗಳನ್ನು ಆಡಿದ ಬಳಿಕ ರೋಹಿತ್ ಶರ್ಮಾ ಸಾರಥ್ಯದ ಭಾರತ ತಂಡ ನವೆಂಬರ್ನಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗೂ ಮುನ್ನ ಭಾರತ ತಂಡಕ್ಕೆ ಬಾಂಗ್ಲಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಸರಣಿಗಳು ಉತ್ತಮ ಅಭ್ಯಾಸ ತಂದುಕೊಡಲಿವೆ.
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಇಂಡಿಯಾದ ಸಂಭಾವ್ಯ ತಂಡ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ಕೀಪರ್), ಧ್ರುವ್ ಜುರೆಲ್ (ವಿಕೆಟ್ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.
ತಂಡದ ಫಾಸ್ಟ್ ಬೌಲಿಂಗ್ ವಿಭಾಗದಲ್ಲಿ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಜೊತೆಗೆ ಮೊಹಮ್ಮದ್ ಶಮಿ ಕೈ ಜೋಡಿಸುವ ಸಾಧ್ಯತೆ ಹೆಚ್ಚಿದೆ. ಮೊಹಮ್ಮದ್ ಶಮಿ, 2023ರ ಒಡಿಐ ವಿಶ್ವಕಪ್ ಬಳಿಕ ಗಾಯದ ಸಮಸ್ಯೆ ಕಾರಣ ಭಾರತ ತಂಡದ ಸೇವೆಯಿಂದ ಹೊರಗುಳಿದಿದ್ದಾರೆ. ಶಸ್ತ್ರಚಿಕಿತ್ಸೆ ಪಡೆದು ಚೇತರಿಸಿರುವ ಶಮಿ, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ. ತಂಡದ ಮೂರನೇ ವೇಗಿಯಾಗಿ ಮೊಹಮ್ಮದ್ ಸಿರಾಜ್ ಕಾಣಿಸಿಕೊಳ್ಳಬಹುದು. ಆಕಾಶ್ ದೀಪ್, ನವದೀಪ್ ಸೈನಿ ಮತ್ತು ಮುಖೇಶ್ ಕುಮಾರ್ ಕೂಡ ರೇಸ್ನಲ್ಲಿದ್ದಾರೆ.