ಸತತ 2ನೇ ಬಾರಿಗೆ ಭಾರತ ವನಿತಾ ಪಡೆ ಟಿ20 ವಿಶ್ವಕಪ್ ಗೆದ್ದಿದೆ. ಕೌಲಾಲಂಪುರದ ಬ್ಯೂಮಾಸ್ ಓವಲ್ ಸ್ಟೇಡಿಯಂನಲ್ಲಿ ನಡೆದ ಅಂಡರ್ 19 ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಮುಖಾಮುಖಿಯಾಗಿದ್ದವು.
ಸರ್ಕಾರಿ Job ಸರ್ಚ್ ಮಾಡ್ತಿದ್ದೀರಾ!? ಜಸ್ಟ್ PUC ಪಾಸಾದ್ರೆ ಸಾಕು! ಇಂದೇ ಇಲ್ಲಿ ಟ್ರೈ ಮಾಡಿ!
ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಸುಲಭವಾಗಿ ದಕ್ಷಿಣ ಆಫ್ರಿಕಾವನ್ನು ಮಣಿಸಿ ಸತತ ಎರಡನೇ ಬಾರಿಗೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ 82 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ ವನಿತಾ ಪಡೆ 11.2 ಓವರ್ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಜಯದ ನಗೆಬೀರಿತು.
ಟೂರ್ನಿಯಲ್ಲಿ ಕನ್ನಡತಿ ನಿಕ್ಕಿ ಪ್ರಸಾದ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಟೀಂ ಇಂಡಿಯಾದ ಪ್ರದರ್ಶನ ಸ್ಮರಣೀಯವಾಗಿತ್ತು. ಅದಕ್ಕೆ ಪೂರಕವಾಗಿ ಭಾರತ ತಂಡ ಇಡೀ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ಪ್ರಶಸ್ತಿ ಗೆದ್ದುಕೊಂಡಿದೆ.