ಭಾರತ ಹಾಗೂ ದಕ್ಷಿಣ ಆಫ್ರಿಕಾ ವನಿತಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ ಜಯ ಸಾಧಿಸಿದೆ.
ಆಸ್ಪತ್ರೆಯಲ್ಲಿ ರೋಗಿಗಳಿಗೆ ಆದ್ಯತೆ ಮೇರೆಗೆ ಚಿಕಿತ್ಸೆ ನೀಡುವಂತೆ ಕೇಂದ್ರ ನಿರ್ದೇಶನ..!
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ನಾಯಕಿ ಹರ್ಮನ್ಪ್ರೀತ್ ಕೌರ್ ಹಾಗೂ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಅವರ ಶತಕದ ನೆರವಿನಿಂದ ನಿಗದಿತ 50 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು ದಾಖಲೆಯ 325 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 50 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 321 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ತಂಡದ ಪರ ನಾಯಕಿ ಲಾರಾ ವೊಲ್ವಾರ್ಡ್ಟ್ ಅಜೇಯ 135 ರನ್ ಹಾಗೂ ಮರಿಜಾನ್ನೆ ಕಪ್ 114 ರನ್ ಬಾರಿಸಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ.
ಈ ಮೂಲಕ ಭಾರತ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಏಕದಿನ ಸರಣಿಯವನ್ನು ಕೈವಶ ಮಾಡಿಕೊಂಡಿದೆ.