ಮಹಿಳಾ ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾದ ಮಹಿಳೆಯರ ತಂಡಕ್ಕೆ BCCI 5 ಕೋಟಿ ರೂ. ನೀಡಿದೆ
ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಸೌತ್ ಆಫ್ರಿಕಾ ತಂಡವನ್ನು ಮಣಿಸಿ 2ನೇ ಬಾರಿ ವಿಶ್ವ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.
ಶ್ರೇಷ್ಠ ಸಾಧನೆಗಾಗಿ ಬಿಸಿಸಿಐ 5 ಕೋಟಿ ರೂ. ಬಹುಮಾನವನ್ನು ಘೋಷಿಸಿದ್ದು, ಈ ನಗದು ಬಹುಮಾನವನ್ನು ಆಟಗಾರರು ಹಾಗೂ ಸಿಬ್ಬಂದಿಗಳು ಹಂಚಿಕೊಳ್ಳಲಿದ್ದಾರೆ.
ಇದಕ್ಕೂ ಮುನ್ನ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಅಂಡರ್-19 ಮಹಿಳಾ ತಂಡವು 20 ಓವರ್ಗಳಲ್ಲಿ 82 ರನ್ಗಳಿಸಿ ಆಲೌಟ್ ಆಗಿತ್ತು. ಟೀಮ್ ಇಂಡಿಯಾ ಪರ ಪರುಣಿಕಾ ಸಿಸೋಡಿಯಾ, ಆಯುಷಿ ಶುಕ್ಲಾ, ವೈಷ್ಣವಿ ಶರ್ಮಾ ತಲಾ 2 ವಿಕೆಟ್ ಕಬಳಿಸಿದರೆ, ಗೊಂಗಡಿ ತ್ರಿಷಾ 3 ವಿಕೆಟ್ ಪಡೆದು ಮಿಂಚಿದರು.
ಇನ್ನು 83 ರನ್ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ಗೊಂಗಡಿ ತ್ರಿಷಾ 33 ಎಸೆತಗಳಲ್ಲಿ ಅಜೇಯ 44 ರನ್ ಬಾರಿಸಿದರೆ, ಸಾನಿಕಾ ಚಲ್ಕೆ ಅಜೇಯ 26 ರನ್ ಚಚ್ಚಿದರು. ಈ ಮೂಲಕ ಭಾರತ ತಂಡವು 11.2 ಓವರ್ಗಳಲ್ಲಿ 84 ರನ್ ಬಾರಿಸಿ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.