ನೋಯ್ಡಾದ (Noida) ಸೆಕ್ಟರ್ 135ರ ಮೈದಾನದಲ್ಲಿ ಕ್ರಿಕೆಟ್ (Cricket) ಆಡುತ್ತಿದ್ದ ಸಂದರ್ಭ 36 ವರ್ಷದ ಟೆಕ್ಕಿ (Techie) ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾರೆ. ಘಟನೆ ಜನವರಿ 6ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
https://x.com/tricitytoday/status/1744770499148923196?s=20
ಉತ್ತರಾಖಂಡ (Uttarakhand) ಮೂಲದ ವ್ಯಕ್ತಿ ವಿಕಾಸ್ ನೋಯ್ಡಾದ ಖಾಸಗಿ ಸಂಸ್ಥೆಯೊಂದರಲ್ಲಿ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ರೋಹಿಣಿಯಲ್ಲಿ ವಾಸಿಸುತ್ತಿದ್ದರು. ವಿಕಾಸ್ ಶನಿವಾರ ಮಧ್ಯಾಹ್ನ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡಲು ಹೋಗಿದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ವಿಕಾಸ್ ರನ್ ಪಡೆಯುವ ಸಲುವಾಗಿ ಓಡುವ ವೇಳೆ ಪಿಚ್ನಲ್ಲಿ ಕುಸಿದು ಬೀಳುತ್ತಿರುವುದನ್ನು ವಿಡಿಯೋ ತೋರಿಸುತ್ತದೆ.
ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟು ಹೊತ್ತಿಗಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿಕಾಸ್ ಮೃತದೇಹವನ್ನು ತಮ್ಮ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟರು