ಬೆಂಗಳೂರು:- ನನ್ನ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು ತಿರುಚಿ ಹಂಚಿಕೊಂಡಿರುವ ತೇಜಸ್ವಿ ಸೂರ್ಯ ಅವರು ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ, ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಈ ಸಂಸದನಲ್ಲಿ ಕಿಂಚಿತ್ತು ಮಾನ ಮರ್ಯಾದೆ ಏನಾದರೂ ಉಳಿದುಕೊಂಡಿದ್ದರೆ ತಾನು ಮಾಡಿರುವ ತಪ್ಪು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದಾರೆ.
ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದು ಎಂದು ಗೊತ್ತಾದ ನಂತರ ರಾಜ್ಯ ಸರ್ಕಾರ ಪರಿಹಾರ ನೀಡಲು ಬದ್ಧವೆಂದು ತಿಳಿಸಿದ್ದು ಮಾತ್ರವಲ್ಲ, ಬೇರೆ ಯಾವ ರಾಜ್ಯದಲ್ಲಿಯಾದರೂ ಹುತಾತ್ಮ ಯೋಧರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿರುವುದು ಗೊತ್ತಾದರೆ ಅಷ್ಟೇ ಮೊತ್ತವನ್ನು ನೀಡಲು ಸಿದ್ಧ ಎಂದು ತಿಳಿಸಿದ್ದೇನೆ. ನಮ್ಮ ಅಧಿಕಾರಿಗಳು ಪರಿಹಾರದ ಚೆಕ್ ಅನ್ನು ಪ್ರಾಂಜಲ್ ಅವರ ಕುಟುಂಬಕ್ಕೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.