ಬೆಂಗಳೂರು:- ಡೆತ್ ನೋಟ್ ಬರೆದು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆತನ ಪತ್ನಿ ನಿಖಿತಾ ಸಿಂಘಾನಿಯಾ ಸೇರಿದಂತೆ ಮೂವರಿಗೆ ಸಿಟಿ ಸಿವಿಲ್ ಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
ಇಡಿ ಅಧಿಕಾರಿಗಳೆಂದು ಉದ್ಯಮಿ ಮನೆಗೆ ದಾಳಿ: 30 ಲಕ್ಷದೊಂದಿಗೆ ಎಸ್ಕೇಪ್!
ಜಾಮೀನು ಕೋರಿ ಮೂವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ, ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಸಿಂಘಾನಿಯಾಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಟೆಕ್ಕಿ ಅತುಲ್ ಅವರು ಡಿಸೆಂಬರ್ 9 ರಂದು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತನ್ನ ಸಾವಿಗೆ ವಿಚ್ಛೇದಿತ ಹೆಂಡತಿ ಮತ್ತು ಅವಳ ಕುಟುಂಬ ಸದಸ್ಯರ ಕಿರುಕುಳವೇ ಕಾರಣ ಎಂದು ಆರೋಪಿಸಿದ್ದರು.
ನಂತರ ಟೆಕ್ಕಿ ಅತುಲ್ ಸುಭಾಷ್ ಅವರ ಸಹೋದರ ವಿಕಾಸ್ ನೀಡಿದ ದೂರಿನ ಆಧಾರದ ಮೇಲೆ ಅತುಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಾರತ್ಹಳ್ಳಿ ಪೊಲೀಸರು ನಿಖಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾ ಅವರನ್ನು ಕಳೆದ ಡಿಸೆಂಬರ್ 15ರಂದು ಬಂಧಿಸಿದ್ದರು.