ಹೈದರಾಬಾದ್: ತೆಲಂಗಾಣ (Telangana) ವಿಧಾನಸಭಾ ಚುನಾವಣೆಯ (Election) ಮತ ಎಣಿಕೆ ನಡೆಯುತ್ತಿದ್ದ ವೇಳೆ ತೆಲಂಗಾಣ ಕಾಂಗ್ರೆಸ್ (Congress) ಮುಖ್ಯಸ್ಥ ರೇವಂತ್ ರೆಡ್ಡಿ (Revanth Reddy) ಅವರನ್ನು ಭೇಟಿ ಮಾಡಿದ್ದಕ್ಕಾಗಿ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ ಅಂಜನಿ ಕುಮಾರ್ ಅವನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ.
ಅಂಜನಿ ಕುಮಾರ್ ಮತ್ತು ಇತರ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ವಿವರಣೆಯನ್ನು ಸಲ್ಲಿಸುವಂತೆ ಕೇಳಲಾಗಿದೆ.
ಅಂಜನಿ ಕುಮಾರ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ಇಂದು (ಭಾನುವಾರ) ಮುಂಜಾನೆ ಹೈದರಾಬಾದ್ನಲ್ಲಿರುವ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಲು ಅವರ ನಿವಾಸಕ್ಕೆ ತೆರಳಿದ್ದರು. ಕಾಂಗ್ರೆಸ್ ಮುಖ್ಯಸ್ಥರಿಗೆ ಉನ್ನತ ಪೊಲೀಸ್ ಪುಷ್ಪಗುಚ್ಛ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಡಿಜಿಪಿ ಅಭ್ಯರ್ಥಿಯೊಬ್ಬರನ್ನು ಭೇಟಿಯಾಗಿರುವುದು ಒಂದು ಪಕ್ಷಕ್ಕೆ ತೋರಿದ ಒಲವು ಎಂಬ ಸ್ಪಷ್ಟ ಸೂಚನೆಯಾಗಿದೆ ಎಂದು ಮೂಲಗಳು ತಿಳಿಸಿವೆ.