ಹೈದರಾಬಾದ್: ಜಿದ್ದಾಜಿದ್ದಿ ಕಣವಾಗಿರುವ ತೆಲಂಗಾಣ ರಾಜ್ಯದಲ್ಲಿಂದು ಮತದಾನ (Telangana Assembly Election 2023) ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭಗೊಂಡಿದ್ದು, ಜನರು ತಮ್ಮ ಹಕ್ಕು ಚಲಾಯಿಸಲು ಉತ್ಸಾಹ ತೋರಿದ್ದಾರೆ.
ಈ ನಡುವೆ ತೆಲುಗು ಚಿತ್ರರಂಗದ ಖ್ಯಾತ ನಟರಾದ ಅಲ್ಲು ಅರ್ಜುನ್ (Allu Arjun), ಜೂನಿಯರ್ ಎನ್ಟಿಆರ್ (Jr NTR) ಹಾಗೂ ಚಿರಂಜೀವಿ (Chiranjeevi) ಹೈದರಾಬಾದ್ನಲ್ಲಿ ತಮ್ಮ ಕುಟುಂಬಗಳೊಂದಿಗೆ ಬಂದು ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಬೆಳ್ಳಂ ಬೆಳಗ್ಗೆಯೇ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ್ದಾರೆ.
ಅಲ್ಲು ಅರ್ಜುನ್ ತಾವೊಬ್ಬರೇ ಮತಗಟ್ಟೆಗೆ ಬಂದು ವೋಟ್ ಮಾಡಿದರು. ಜೂನಿಯರ್ ಎನ್ಟಿಆರ್ ಲಕ್ಷ್ಮಿ ಪ್ರಣತಿ, ತಾಯಿ ಶಾಲಿನಿ ನಂದಮೂರಿ ಅವರೊಂದಿಗೆ ಬಂದು ವೋಟ್ ಮಾಡಿದ್ರು. ಇನ್ನೂ ಮೆಗಾಸ್ಟಾರ್ ಚಿರಂಜೀವಿ ಸಹ ತಮ್ಮ ಕುಟುಂಬ ಸಮೇತರಾಗಿ ಬಂದು ವೋಟ್ ಮಾಡಿ ತನ್ಮ ಹಕ್ಕು ಚಲಾಯಿಸಿದರು. ಜೊತೆಗೆ ಪ್ರತಿಯೊಬ್ಬರು ಬಂದು ವೋಟ್ ಮಾಡುವಂತೆ ಮನವಿ ಮಾಡಿದರು. ಸದ್ಯ ಸ್ಟಾರ್ಸ್ಗಳು ವೋಟ್ ಮಾಡಿರುವ ಫೋಟೋ ವೀಡಿಯೋ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ