ಮಂಡ್ಯ: ಜಿಲ್ಲೆಯ ಬೇಬಿ ಬೆಟ್ಟದಲ್ಲಿ (Baby Hills) ಟ್ರಯಲ್ ಬ್ಲಾಸ್ಟ್ (Trial Blast) ನಡೆಸಿದರೆ ಹಳೆ ಮೈಸೂರು ಭಾಗದ ಜೀವನಾಡಿಯಾದ ಕೆಆರ್ಎಸ್ (KRS) ಅಣೆಕಟ್ಟೆಗೆ ಅಪಾಯ ಎದುರಾಗುತ್ತೆ ಎಂದು ಬೇಬಿ ಬೆಟ್ಟದಲ್ಲಿನ ಟ್ರಯಲ್ ಬ್ಲಾಸ್ಟ್ಗೆ ರೈತ ಸಂಘಟನೆಗಳು ವಿರೋಧಿಸಿದ ಬೆನ್ನಲ್ಲೇ ಇದೀಗ ಟ್ರಯಲ್ ಬ್ಲಾಸ್ಟ್ಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ.
By Election: ಮೈತ್ರಿ ನಾಯಕರಿಗೆ ಸೆಡ್ಡು ಹೊಡೆಯಲು ಸಿ.ಪಿ.ಯೋಗೇಶ್ವರ್ ರೆಡಿ: ಏನಂದ್ರು ಗೊತ್ತಾ?
ಇಂದು ಬೇಬಿ ಬೆಟ್ಟದ ಟ್ರಯಲ್ ಬ್ಲಾಸ್ಟ್ ವಿಚಾರ ಸಂಬಂಧ ಸಚಿವ ಚಲುವರಾಯಸ್ವಾಮಿ (Chaluvarayaswamy) ಮಂಡ್ಯ (Mandya) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ಕರೆದಿದ್ದರು. ಈ ಸಭೆಯಲ್ಲಿ ಜನಪ್ರತಿನಿಧಿಗಳು, ರೈತ ಸಂಘಟನೆಯ ಮುಖಂಡರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಭಾಗಿಯಾಗಿದ್ದರು. ಆರಂಭದಲ್ಲಿ ಟ್ರಯಲ್ ಬ್ಲಾಸ್ಟ್ ಸಂಬಂಧ ರೈತ ಸಂಘಟನೆಗಳ ಮುಖಂಡರು ಈ ಬಗ್ಗೆ ಮಾತನಾಡಿದರು.
ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಯನ್ನು ಮತ್ತೆ ಮಾಡಲು ಅವಕಾಶ ನೀಡಿದರೆ ಕೆಆರ್ಎಸ್ ಅಣೆಕಟ್ಟೆಗೆ ಅಪಾಯ ಎದುರಾಗೋದು ನಿಶ್ಚಿತವಾಗಿದೆ. ಕೆಆರ್ಎಸ್ ಡ್ಯಾಂ ಅನ್ನು ಲಕ್ಷಾಂತರ ಜನರು ಅವಲಂಬಿಸಿದ್ದಾರೆ. ಮೈಸೂರು ಮಹಾರಾಜರು ನಮಗೆ ನೀಡಿರುವ ಅಮೂಲ್ಯ ಕೊಡುಗೆ ಕೆಆರ್ಎಸ್ ಡ್ಯಾಂ ಆಗಿದೆ. ಇದೀಗ ಇಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಿ ಮುಂದೆ ಗಣಿಗಾರಿಕೆಗೆ ಅನುಮತಿ ನೀಡಿದ್ರೆ ಡ್ಯಾಂಗೆ ಹಾನಿಯಾಗುತ್ತದೆ. ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡದೆ ಸುಗ್ರೀವಾಜ್ಞೆ ಜಾರಿಗೆ ತರಬೇಕೆಂದು ರೈತ ಸಂಘಟನೆಗಳ ಮುಖಂಡರು ಆಗ್ರಹ ಮಾಡಿದರು.