ಬಾಗಲಕೋಟೆ: ಶಾಲಾ ಬಸ್ ಹಾಗೂ ಟ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿರುವ ಘಟನೆ ಬಾಗಲಕೋಟೆಯ ಜಿಲ್ಲೆ ಜಮಖಂಡಿ ತಾಲ್ಲೂಕಿನ ಅಲಗೂರು ಗ್ರಾಮದಲ್ಲಿ ನಡೆದಿದೆ.
ತಡರಾತ್ರಿ ನಡೆದ ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 8ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಸಾಗರ ಕಡಕೋಳ (17), ಶ್ವೇತಾ (13), ಗೋವಿಂದ(13), ಬಸವರಾಜ (17) ಮೃತ ವಿದ್ಯಾರ್ಥಿಗಳು.
Home Loan: ನೀವು ಮನೆ ಖರೀದಿಗೆ ಯೋಚಿಸುತ್ತಿದ್ದೀರಾ.? ಈ ಬ್ಯಾಂಕ್ʼಗಳಲ್ಲಿ ಸಿಗುತ್ತೆ ಕಡಿಮೆ ಬಡ್ಡಿಗೆ ಗೃಹ ಸಾಲ..!
ಮೃತರು ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ಇಬ್ಬರು ಪಿಯುಸಿ, ಮತ್ತಿಬ್ಬರು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ. ಭಾನುವಾರ ಸ್ನೇಹಿತರೊಟ್ಟಿಗೆ ಕಾರ್ಯಕ್ರಮ ಮುಗಿಸಿಕೊಂಡು ಕವಟಗಿ ಗ್ರಾಮದ ಕಡೆಗೆ ಸ್ಕೂಲ್ಬಸ್ ಹೊರಟಿತ್ತು. ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸದ್ಯ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.