ಮಂಡ್ಯ: ಬೆಂಗಳೂರು -ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿ ಕಾರಿನಲ್ಲಿ ಇದ್ದ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಟಿ.ಎಂ.ಹೊಸೂರು ಗ್ರಾಮದ ಬಳಿ ಘಟನೆ ನಡೆದಿದೆ.
ಮೈಸೂರು ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಮತ್ತು ಬೆಂಗಳೂರು ಕಡೆಗೆ ತೆರಳುತ್ತಿದ್ದ ವರ್ಣಾ ಕಾರು ನಡುವೆ ಅಪಘಾತ ಸಂಭವಿಸಿದೆ. ವರ್ಣಾ ಕಾರು ಡಿವೈಡರ್ ಹಾರಿ ಎದುರಿಗೆ ಬಂದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಮೈಸೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.