ದಾವಣಗೆರೆ:– ನಗರ ಹೊರಭಾಗದ ರಾ.ಹೆದ್ದಾರಿ 48 ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲಿಯೇ ಇಬ್ಬರ ಸಾವು, ಏಳು ಜನರಿಗೆ ಗಂಭೀರ ಗಾಯವಾಗಿದೆ.
ಕಾರ್ ಮತ್ತು ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿದೆ. ಓವರ್ ಟೇಕ್ ಮಾಡುತ್ತಿದ್ಧಾಗ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಗೆ ಕಾರ್ ಡಿಕ್ಕಿ ಹೊಡೆದಿದೆ. ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ನಜ್ಜು ಗುಜ್ಜಾಗಿದೆ.
ಅರುಣಕುಮಾರ್ ಶೆಟ್ಟರ್ ಹಾಗೂ ವಿಜಯಕ್ಕ ಶೆಟ್ಟರ್ ಮೃತ ದುರ್ದೈವಿಗಳು. ಇನ್ನುಳಿದಂತೆ ಚಾಲಕ ಸೇರಿ ಏಳು ಜನರು ಗಂಭೀರ ಗಾಯ, ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲಕ ಶೆಟ್ಟರ್ ಕುಟುಂಬದ ಸದಸ್ಯರು, ತುಮಕೂರಿನಿಂದ ಮದುವೆ ಮುಗಿಸಿಕೊಂಡು ರಾಣೆಬೆನ್ಣೂರಿಗೆ ತೆರಳುತ್ತಿದ್ದರು. ಈ ವೇಳೆ ದಾವಣಗೆರೆ ಹೊರಭಾಗದ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.
ವಿದ್ಯಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.