ಗದಗ: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿ ಇರುವ ಶೌಚಾಲಯದ ಗೋಡೆಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಕಳಸಾಪೂರ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಕಾರ್ನಲ್ಲಿರುವ ಬಲೂನ್ ಬಿಚ್ಚಿದರೂ ಕೂಡಾ ಇಬ್ಬರ ಪ್ರಾಣ ಮಾತ್ರ ಉಳಿದಿಲ್ಲ.
ಮೃತರನ್ನು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸಿದ್ದಯ್ಯ ಪಾಟೀಲ್ ಹಾಗೂ ಬಾಬು ತಾರಿಹಾಳ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಶಶಿ ಪಾಟೀಲ್ ಅನ್ನೋರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಚಿಕಿತ್ಸೆ ನೀಡಲಾಗ್ತಿದೆ. ಆಸ್ಪತ್ರೆಗೆ ಗದಗ ಎಸ್ಪಿ ಬಿ.ಎಸ್. ನೇಮಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.