ಶಿಮ್ಲಾ: ಕೇರಳದ ವೈನಾಡಿನಲ್ಲಿ ಮಳೆ ಆರ್ಭಟ ಮುಂದುವರಿದ ಪರಿಣಾಮದ ಬೆನ್ನಲ್ಲೇ ಈಗ ಶಿಮ್ಲಾದಲ್ಲಿ ಕೂಡ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. 20 ಮಂದಿ ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯಲ್ಲಿ ಭಾರೀ ಅನಾಹುತ ಸಂಭವಿಸಿದೆ. ಇಲ್ಲಿ ಶಿಮ್ಲಾದಿಂದ 100 ಕಿಮೀ ದೂರದಲ್ಲಿರುವ ರಾಂಪುರದ ಜಕ್ರಿಯಲ್ಲಿ ಮೇಘಸ್ಫೋಟ ಉಂಟಾಗಿದೆ.
PM Usha Scholarship: PUC ಪಾಸಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ₹20,000 ಆರ್ಥಿಕ ನೆರವು.! ಇಂದೇ ಅರ್ಜಿ ಸಲ್ಲಿಸಿ
ಸದ್ಯ ಶಿಮ್ಲಾ ಡಿಸಿ ಅನುಪಮ್ ಕಶ್ಯಪ್ ಮತ್ತು ಎಸ್ಪಿ ಶಿಮ್ಲಾ ಸಂಜೀವ್ ಗಾಂಧಿ ಸ್ಥಳಕ್ಕೆ ತೆರಳಿದ್ದಾರೆ. ಇಲ್ಲಿ ಒಟ್ಟು 20 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಎನ್ಡಿಆರ್ಎಫ್ ತಂಡಗಳನ್ನೂ ಸ್ಥಳಕ್ಕೆ ಕಳುಹಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಎನ್ಡಿಎಸ್ಆರ್ಎಫ್ ತಂಡ, ಪೊಲೀಸರು ಮತ್ತು ರಕ್ಷಣಾ ತಂಡ ಘಟನಾ ಸ್ಥಳಕ್ಕೆ ತೆರಳಿದೆ ಎಂದು ಡಿಸಿ ಅನುಪಮ್ ಕಶ್ಯಪ್ ತಿಳಿಸಿದ್ದಾರೆ.