ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಉಗ್ರರ ದಾಳಿಗೆ ವಿಲೇಜ್ ಡಿಫೆನ್ಸ್ ಗ್ರೂಪ್ ನ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಂಟ್ವಾರದ ಕಿಶ್ತ್ವಾರದ ಅರಣ್ಯ ಪ್ರದೇಶದಲ್ಲಿ ಭೀಕರವಾಗಿ ಹತ್ಯೆ ನಡೆದಿದೆ. ವಿಲೇಜ್ ಡಿಫೆನ್ಸ್ ಗ್ರೂಪ್ನ ಸದಸ್ಯರನ್ನು ನಜೀರ್ ಅಹ್ಮದ್ ಮತ್ತು ಕುಲದೀಪ್ ಕುಮಾರ್ ಎಂದು ಗುರುತಿಸಲಾಗಿದೆ.
ಇಲ್ಲಿನ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆಗೈದ ಕೆಲವೇ ಗಂಟೆಗಳಲ್ಲಿ ಶಂಕಿತ ಉಗ್ರರ ದಾಳಿ ನಡೆದಿದೆ. ಅವರ ಮೃತದೇಹಗಳನ್ನು ಇನ್ನಷ್ಟೇ ಹೊರತೆಗೆಯಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Waqf Board: ಏನಿದು ವಕ್ಫ್ ತಿದ್ದುಪಡಿ ಕಾಯ್ದೆ..? ರೈತರಿಗೆ ಹೇಗೆ ತೊಂದರೆಯಾಗುತ್ತದೆ.? ಇಲ್ಲಿದೆ ಸಂಪೂರ್ಣ ಮಾಹಿತಿ
ಜೆ&ಕೆ ಸಿಎಂ ಒಮರ್ ಅಬ್ದುಲ್ಲಾ ಮತ್ತು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಉಪ ಮುಖ್ಯಮಂತ್ರಿ ಸುರೀಂದರ್ ಚೌಧರಿ ಈ ದಾಳಿಯನ್ನು ಖಂಡಿಸಿದ್ದಾರೆ. ಇಂತಹ ಹಿಂಸಾಚಾರ, ಭಯೋತ್ಪಾದಕ ದಾಳಿಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ದೀರ್ಘಕಾಲ ಶಾಂತಿ ನೆಲೆಸಲು ಅಡ್ಡಿಯಾಗಿವೆ ಎಂದು ಅಸಮಾಧಾನ ಹೊರಹಾಕಿದ್ದಾರೆ.