ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ RCB ಮಾಜಿ ಆಟಗಾರ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ವಿಶೇಷ ಮೈಲಿಗಲ್ಲು ದಾಟಿದ್ದಾರೆ.
ಕುಮಾರಕೃಪಾ ರಸ್ತೆಯಲ್ಲಿ ಚಿತ್ರಸಂತೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ!
ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ನಾಲ್ಕು ವಿಕೆಟ್ಗಳೊಂದಿಗೆ ಸಿರಾಜ್ ಟೆಸ್ಟ್ ಕ್ರಿಕೆಟ್ನಲ್ಲಿ 100 ವಿಕೆಟ್ಗಳ ಸಾಧನೆ ಮಾಡಿದ್ದಾರೆ.
ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ನೂರು ವಿಕೆಟ್ ಕಬಳಿಸಿ ಭಾರತದ 4ನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಭಾರತೀಯ ಬೌಲರ್ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ (195) ಅಗ್ರಸ್ಥಾನದಲ್ಲಿದ್ದರೆ, ಜಸ್ಪ್ರೀತ್ ಬುಮ್ರಾ (156) ಹಾಗೂ ರವೀಂದ್ರ ಜಡೇಜಾ (131) ನಂತರದ ಸ್ಥಾನಗಳಲಿದ್ದಾರೆ. ಇದೀಗ ಈ ಪಟ್ಟಿಗೆ ಮೊಹಮ್ಮದ್ ಸಿರಾಜ್ ಕೂಡ ಎಂಟ್ರಿ ಕೊಟ್ಟಿದ್ದಾರೆ.
ಟೀಮ್ ಇಂಡಿಯಾ ಪರ ಈವರೆಗೆ 36 ಟೆಸ್ಟ್ ಪಂದ್ಯಗಳನ್ನಾಡಿರುವ ಮೊಹಮ್ಮದ್ ಸಿರಾಜ್ 67 ಇನಿಂಗ್ಸ್ಗಳಲ್ಲಿ 5306 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 3.48 ಎಕಾನಮಿ ರೇಟ್ನಲ್ಲಿ ಒಟ್ಟು 100 ವಿಕೆಟ್ಗಳನ್ನು ಕಬಳಿಸಿದ್ದಾರೆ.
ಈ ನೂರು ವಿಕೆಟ್ಗಳೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತ ಪರ ಟೆಸ್ಟ್ನಲ್ಲಿ ಶತಕ ಪೂರೈಸಿದ 24ನೇ ಬೌಲರ್ ಎನಿಸಿಕೊಂಡಿದ್ದಾರೆ.