ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಅನಗತ್ಯ ದಾಖಲೆಯೊಂದು ಬರೆದಿದ್ದಾರೆ.
ಟಿ20 ಕ್ರಿಕೆಟ್ ಅಂದ್ರೆನೇ ಹೊಡಿಬಡಿ ಆಟ. ಆದರೆ ಈ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿ ಪಾಕಿಸ್ತಾನ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಅತ್ಯಂತ ಕಳಪೆ ದಾಖಲೆ ಬರೆದಿದ್ದಾರೆ.
ಮುರುಡೇಶ್ವರದಲ್ಲಿ ವಿದ್ಯಾರ್ಥಿಗಳು ನೀರು ಪಾಲು ; ಆತಂಕದಲ್ಲಿ ಪೋಷಕರು ; ವಸತಿ ಶಾಲೆ ಬಳಿ ಬಿಗಿ ಭದ್ರತೆ
ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಹೆನ್ರಿಕ್ ಕ್ಲಾಸೆನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 183 ರನ್ ಕಲೆಹಾಕಿತು.
ಗುರಿಯನ್ನು ಬೆನ್ನತ್ತಿದ ಪಾಕ್ ತಂಡವು ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ (0) ಶೂನ್ಯಕ್ಕೆ ಔಟಾದರು. ಈ ಆರಂಭಿಕ ಆಘಾತವನ್ನು ತಪ್ಪಿಸಲು ಮೊಹಮ್ಮದ್ ರಿಝ್ವಾನ್ ಎಚ್ಚರಿಕೆಯ ಬ್ಯಾಟಿಂಗ್ನ ಮೊರೆ ಹೋದರು.
ಎಚ್ಚರಿಕೆಯೊಂದಿಗೆ ಸೌತ್ ಆಫ್ರಿಕಾ ವೇಗಿಗಳ ಮಾರಕ ದಾಳಿ ಮುಂದೆ ಸೆಟೆದು ನಿಂತ ರಿಝ್ವಾನ್ ರನ್ ಗಳಿಸಲು ಮರೆತರು. ಪರಿಣಾಮ ಪವರ್ ಪ್ಲೇನಲ್ಲಿ 19 ಎಸೆತಗಳನ್ನು ಎದುರಿಸಿ ಕಲೆಹಾಕಿದ್ದು ಕೇವಲ 15 ರನ್ ಮಾತ್ರ.
ಇನ್ನು ಪವರ್ ಪ್ಲೇ ಬಳಿಕ ಮೊಹಮ್ಮದ್ ರಿಝ್ವಾನ್ ಸಂಪೂರ್ಣ ಪವರ್ ಕಳೆದುಕೊಂಡರು. ಅಲ್ಲದೆ ಪವರ್ ಇಲ್ಲದ ಬ್ಯಾಟಿಂಗ್ ನೊಂದಿಗೆ 50 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್ನ ಅತ್ಯಂತ ಹೀನಾಯ ದಾಖಲೆ ರಿಝ್ವಾನ್ ಪಾಲಾಯಿತು.
ಅಂದರೆ ಬರೋಬ್ಬರಿ 50 ಎಸೆತಗಳಲ್ಲಿ ಅರ್ಧಶತಕ ಪೂರೈಸಿ, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಹಾಫ್ ಸೆಂಚುರಿ ಸಿಡಿಸಲು ಅತ್ಯಧಿಕ ಎಸೆತಗಳನ್ನು ಎದುರಿಸಿದ ಕ್ಯಾಪ್ಟನ್ ಎನಿಸಿಕೊಂಡರು.