ಸಿಂಗಾಪುರ: ಇಲ್ಲಿನ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ 66 ವರ್ಷದ ಥರ್ಮನ್ ಷಣ್ಮುಗರತ್ನಂ (Tharman Shanmu garatnam) ಅವರು ಪ್ರಮಾಣವಚನ ಸ್ವೀಕರಿಸಿದರು. ಸಿಂಗಾಪುರದ ಅರ್ಥಶಾಸ್ತ್ರಜ್ಞರಾಗಿರುವ ಇವರು ಸಿಂಗಾಪುರದ (Singapore President) 9ನೇ ಅಧ್ಯಕ್ಷರಾಗಿ ಆಯ್ಕೆಯಾದರು. ಸಿಂಗಾಪುರದ ಅಧ್ಯಕ್ಷರ ಅಧಿಕೃತ ನಿವಾಸದಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ಮೂಲದ ಮುಖ್ಯ ನ್ಯಾಯಮೂರ್ತಿ ಸುಂದರೇಶ್ ಮೆನನ್ ಅವರು ಥರ್ಮನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಥರ್ಮನ್ ಅವರು ಆರು ವರ್ಷಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ. ಸಮಾರಂಭದಲ್ಲಿ ಪ್ರಧಾನಿ ಲೀ ಸೈನ್ ಲೂಂಗ್, ಸಂಪುಟ ಸದಸ್ಯರು, ಸಂಸದರು, ಉನ್ನತ ಅಧಿಕಾರಿಗಳು ಮತ್ತು ರಾಜತಾಂತ್ರಿಕ ಸದಸ್ಯರು ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಥರ್ಮನ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಈ ಚಹಾಗಳನ್ನು ಕುಡಿದ್ರೆ ಅಜೀರ್ಣ ಹಾಗೂ ಮಲಬದ್ಧತೆ ಸಮಸ್ಯೆ ಇರಲ್ಲವಂತೆ..!
ಅಲ್ಲದೆ ಭಾರತ ಹಾಗೂ ಸಿಂಗಾಪುರ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ಷಣ್ಮುಗರತ್ನಂ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. ಕಳೆದ ಶುಕ್ರವಾರ ನಡೆದ ಸಿಂಗಾಪುರ ಅಧ್ಯಕ್ಷೀಯ ಚುನಾವಣೆಯಲ್ಲಿ ಷಣ್ಮುಗರತ್ನಂ ಅವರು ಚೀನಾ ಮೂಲದ ಇಬ್ಬರು ಪ್ರತಿಸ್ಪರ್ಧಿಗಳನ್ನು ಸೋಲಿಸಿದ್ದರು.
