ನನ್ನ ಕೊಲ್ಲಲು ಆ ಗ್ಯಾಂಗ್ ಯತ್ನಿಸುತ್ತಿದೆ ಎಂದು ನಟ ಸಲ್ಮಾನ್ ಖಾನ್ ಗುಂಡಿನ ದಾಳಿ ಬಗ್ಗೆ ಮಾತಾಡಿದ್ದಾರೆ.
ಕೆಲವು ತಿಂಗಳ ಹಿಂದೆ ತಮ್ಮ ಮನೆ ಮೇಲೆ ನಡೆದ ದಾಳಿ ಬಗ್ಗೆ ಇದೀಗ ಮಾತನಾಡಿರುವ ಸಲ್ಲು, ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನನ್ನನ್ನು ಕೊಲ್ಲಲು ಸಕಲ ಪ್ರಯತ್ನವನ್ನೂ ನಡೆಸುಲ್ಲೇ ಇದೆ. ಗುಂಡಿನ ದಾಳಿ ಬಳಿ ನನ್ನ ಕುಟುಂಬಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ವಿಜಯಲಕ್ಷ್ಮಿ ಬಂದು ಆ ವಿಚಾರದ ಬಗ್ಗೆ ಮಾತಾಡಿದ್ರು ಆದ್ರೆ: ದರ್ಶನ್ ಪತ್ನಿ ಭೇಟಿ ಬಳಿಕ ಡಿಕೆಶಿ ಹೇಳಿಕೆ!
ಅಂದು ನನಗೆ ಪಟಾಕಿಯಂತಹ ಸದ್ದು ಕೇಳಿಸಿತ್ತು. ಸುಮಾರು ಬೆಳಗ್ಗೆ 4.55 ಗಂಟೆ ಹೊತ್ತಿಗೆ ಬೈಕ್ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗ್ಯಾಲಕ್ಸಿ ಅಪಾರ್ಟ್ಮೆಂಟ್ನ ಬಾಲ್ಕನಿಯನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದರು. ನನ್ನನ್ನು ಮತ್ತು ನನ್ನ ಕುಟುಂಬಸ್ಥರನ್ನು ಗುರಿಯಾಗಿಸಿ ಆ ದಾಳಿ ನಡೆದಿತ್ತು. ಲಾರೆನ್ಸ್ ಬಿಷ್ಣೋಯಿ ಈ ಕೃತ್ಯದ ಹೊಣೆ ಹೊತ್ತುಕೊಂಡಿರುವ ಬಗ್ಗೆ ಮಾಧ್ಯಮಗಳ ಮೂಲಕ ಮಾಹಿತಿ ಸಿಕ್ಕಿತ್ತು.
ಎಪ್ರಿಲ್ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್ಗಳಾದ ಸಾಗರ್ ಪಾಲ್ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.
ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್ ಥಾಪನ್ ಕೆಲವು ದಿನಗಳ ಹಿಂದೆ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು.