ರಾಯಚೂರು: ಕರ್ತವ್ಯ ನಿರತ ಪೊಲೀಸ್ ಪೇದೆಗಳ ಮೇಲೆ ಅಟ್ಟಾಡಿಸಿಕೊಂಡು ಕಬ್ಬಿಣದ ರಾಡು, ಕಲ್ಲುಗಳಿಂದ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಕಾಲುವೆ ಬಳಿ ನಡೆದಿದೆ. ಕಾಪರ್ ವೈರ್ ಕಳ್ಳತನ ಆರೋಪಿಗಳನ್ನು ಬಂಧಿಸಲು ಹೋದಾಗ, ಬಳಗಾನೂರ ಠಾಣೆಯ ಪೊಲೀಸ್ ಪೇದೆ ಗಳಾದ ಮಂಜುನಾಥ್ ಹಾಗೂ ಗೋಪಾಲ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ.
ಗಾಯಗೊಂಡ ಕಾನ್ಸ್ಟೇಬಲ್ಗಳಿಗೆ ಸಿಂಧನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾ ಗುತ್ತಿದ್ದು, ಹಲ್ಲೆಗೈದ ಆರೋಪಿಗಳಿಗಾಗಿ ಬಳಗಾನೂರ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಕುರಿತು ಬಳಗಾನೂರ ಠಾಣೆಯಲ್ಲಿ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರ ಮೇಲೆ ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.