ಮಂಡ್ಯ : ಮಹಡಿ ಮನೆ ಮೇಲೆ ಪ್ಲಾಸ್ಟಿಕ್ ಪಾಟ್ಗಳಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ 25 ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿರುವ ಮದ್ದೂರು ಗ್ರಾಮಾಂತರ ಪೋಲೀಸರು ಶುಕ್ರವಾರ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಗಿರೀಶ್ ಮಟ್ಟಣ್ಣವರ ವಿರುದ್ಧ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಸಂಘದ ಮಹಿಳೆಯರ ಆಕ್ರೋಶ
ಮದ್ದೂರು ತಾಲೂಕಿನ ಕೊಪ್ಪ ಪೋಲೀಸ್ ಠಾಣಾ ವ್ಯಾಪ್ತಿಯ ಹಳೇಹಳ್ಳಿ ಗ್ರಾಮದ ಕರಿಯಪ್ಪ ಬಿನ್ ನಿಂಗೇಗೌಡ ಎಂಬುವವರು ಮನೆಯ ಮೇಲಿನ ಪ್ಲಾಸ್ಟಿಕ್ ಪಾಟ್ ಗಳಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮದ್ದೂರು ಗ್ರಾಮಾಂತರ ವೃತ್ತ ನಿರೀಕ್ಷಕ ವೆಂಕಟೇಗೌಡ ಅವರ ಮಾರ್ಗದರ್ಶನದಲ್ಲಿ ಕೊಪ್ಪ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗಳು ದಾಳಿ ಮಾಡಿ 3 ಕೆಜಿ 664 ಗ್ರಾಂನಷ್ಟು ಗಾಂಜಾ ಸೊಪ್ಪನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿ ವಿರುದ್ಧ ಎನ್ಡಿಪಿಸಿ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದ್ದು, ಕೊಪ್ಪ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.