ಮುಂಬೈ: ಕೊಲೆ ಪ್ರಕರಣವೊಂದರಲ್ಲಿ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು 31 ವರ್ಷಗಳ ನಂತರ ಮಹಾರಾಷ್ಟ್ರ (Maharashtra) ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೀಪಕ್ ಭಿಸೆ (62) ಎಂದು ಗುರುತಿಸಲಾಗಿದೆ. ಪೊಲೀಸರು ಸುಮಾರು 31 ವರ್ಷಗಳಿಂದಲೂ ನಿರಂತರವಾಗಿ ಆತನಿಗಾಗಿ ಹುಡುಕಾಟ ನಡೆಸಿದ್ದರು.
ಆರೋಪಿ ಬಗ್ಗೆ ವಿಚಾರಿಸಲು ಆತನ ಊರಿಗೆ ತೆರಳಿದಾಗ ಆತ ಮೃತಪಟ್ಟಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದರು. ಈಗ ದೀಪಕ್ ಪಾಲ್ಘರ್ ಜಿಲ್ಲೆಯ ನಲಸೋಪಾರಾ ಎಂಬಲ್ಲಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಾಗಿ ಹುಟುಕಾಟ ನಡೆಸಿದ್ದ ಪೊಲೀಸರಿಗೆ ಮೊದಲು ಆತನ ಪತ್ನಿಯ ಮೊಬೈಲ್ ನಂಬರ್ ಸಿಕ್ಕಿದೆ. ಇದರಿಂದ ಆರೋಪಿಯ ಸುಳಿವು ಸಿಕ್ಕಿದೆ.
Bank Holidays: ಬ್ಯಾಂಕ್ ಗ್ರಾಹಕರೇ ಗಮನಿಸಿ.. 2024ರ ಜನವರಿಯಲ್ಲಿ ಬರೋಬ್ಬರಿ 16 ದಿನ ಬ್ಯಾಂಕ್ ರಜೆ!
ಆರೋಪಿ 1989 ರಲ್ಲಿ ರಾಜುಚಿಕ್ಕ ಎಂಬಾತನನ್ನು ಕೊಲೆಗೈದು ಧಮೇರ್ಂದ್ರ ಸರೋಜ್ ಎಂಬವರ ಕೊಲೆಗು ಸಹ ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಆರೋಪಿ ದೀಪಕ್ನನ್ನು ಹಿಂದೆ ಬಂಧಿಸಲಾಗಿತ್ತು. ಆತ 1992 ರಲ್ಲಿ ಜಾಮೀನು ಪಡೆದ ಬಳಿಕ ವಿಚಾರಣೆಗೆ ಹಾಜರಾಗಿರಲಿಲ್ಲ. 2003 ರಲ್ಲಿ ನ್ಯಾಯಾಲಯ (Court) ಆತ ತಲೆಮರೆಸಿಕೊಂಡಿದ್ದಾನೆ ಎಂದು ಘೋಷಿಸಿತ್ತು.