ಬೆಂಗಳೂರು:- ಕನ್ನಡಕ್ಕಾಗಿ ಹೋರಾಟ ಮಾಡಿದವರ ಬಂಧನ ಖಂಡನೀಯ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕನ್ನಡ ನಾಮಫಲಕ ಕಡ್ಡಾಯ ಮಾಡಬೇಕು. ಕನ್ನಡ ಹೋರಾಟಗಾರರನ್ನು ಬಂಧನದಿಂದ ಬಿಡುಗಡೆ ಮಾಡಬೇಕು. ನಮ್ಮ ಬೇಡಿಕೆಯ ಮನವಿಯನ್ನು ಮುಖ್ಯಮಂತ್ರಿ ಅವರಿಗೆ ನೀಡುತ್ತೇವೆ. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಬಂದ್ ಮಾಡುತ್ತೇವೆ. ಫೆಬ್ರುವರಿ ಎರಡನೇ ವಾರ ಬಂದ್ ಮಾಡುತ್ತೇವೆ. ಅನ್ಯಭಾಷೆ ಸಿನಿಮಾ ಪ್ರದರ್ಶನ ಬಂದ್ ಮಾಡುತ್ತೇವೆ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಹಾಗೂ ರಾಜ್ಯದಲ್ಲಿ ಕನ್ನಡ ನಾಮಫಲಕ ಕಡ್ಡಾಯ ವಿಚಾರವಾಗಿ ಹೋರಾಟ ನಡೆಸಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಹಾಗೂ ಕನ್ನಡಪರ ಹೋರಾಟಗಾರರನ್ನು ಬಂಧಿಸಿರುವುದನ್ನು ಇದೇ ವೇಳೆ ಖಂಡಿಸಿದರು.