ಸಿಡ್ನಿ: ದಕ್ಷಿಣ ಆಫ್ರಿಕಾ (South Africa) ವಿರುದ್ಧ ನಡೆದ 2 ಪಂದ್ಯಗಳ ಟೆಸ್ಟ್ ಸರಣಿ ಬಳಿಕ ಭಾರತ ಐಸಿಸಿ ರ್ಯಾಂಕಿಂಗ್ನಲ್ಲಿ ನಂ.1 ಸ್ಥಾನ ಕಳೆದುಕೊಂಡಿದೆ. ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟ್ರೋಫಿ ಗೆಲ್ಲುವ ಟೀಂ ಇಂಡಿಯಾದ ಕನಸನ್ನು ಭಗ್ನಗೊಳಿಸಿದ್ದ ಆಸ್ಟ್ರೇಲಿಯಾ (Australia) ತಂಡ ಇದೀಗ ಟೆಸ್ಟ್ ರ್ಯಾಂಕಿಂಗ್ನಲ್ಲಿ ದೀರ್ಘಾಧಿಯವರೆಗೆ ನಂ.1 ಸ್ಥಾನದಲ್ಲಿದ್ದ ಭಾರತವನ್ನು (Taam India) ನಂ.1 ಸ್ಥಾನದಿಂದ ಕೆಳಗಿಳಿಸಿದೆ.
ಪಾಕಿಸ್ತಾನದ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ (Test Series) ಈಗಾಗಲೇ 2-0 ಮುನ್ನಡೆ ಸಾಧಿಸಿ ಸರಣಿ ಕೈವಶ ಮಾಡಿಕೊಂಡಿರುವ ಆಸೀಸ್ ಐಸಿಸಿ ಟೆಸ್ಟ್ ರ್ಯಾಂಕಿಂಗ್ನಲ್ಲಿ (ICC Test Ranking) ನಂ.1 ಸ್ಥಾನಕ್ಕೇರಿದೆ. ಇದರಿಂದ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಬಗ್ಗೆಯೂ ಮೆಚ್ಚುಗೆ ಮಾತುಗಳು ಕೇಳಿಬರುತ್ತಿವೆ. ಆದ್ರೆ 3ನೇ ಆವೃತ್ತಿಯ ವಿಶ್ವಟೆಸ್ಟ್ ಚಾಂಪಿಯನ್ಶಿಪ್ (WTC) ಪಾಯಿಂಟ್ಸ್ ಪಟ್ಟಿಯಲ್ಲಿ ಭಾರತವೇ ನಂ.1 ಇರುವುದು ವಿಶೇಷ.
ಇತ್ತೀಚೆಗೆ ಮುಕ್ತಾಯಗೊಂಡ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯು 1-1ರಲ್ಲಿ ಸಮಬಲ ಸಾಧಿಸಿತು. ಇನ್ನು ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸೀಸ್ 2-0 ಮುನ್ನಡೆ ಸಾಧಿಸಿದೆ. 3ನೇ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ 313 ರನ್ ಗಳಿಸಿದ್ದ ಪಾಕ್, ಅಂತಿಮ ಪಂದ್ಯದ ದ್ವಿತೀಯ ಇನ್ನಿಂಗ್ಸ್ನಲ್ಲಿ 68 ರನ್ಗಳಿಗೆ 7 ವಿಕೆಟ್ ಕಳೆದುಕೊಂಡಿದೆ. ಮೊದಲ ಇನ್ನಿಂಗ್ಸ್ನಲ್ಲಿ 299 ರನ್ ಗಳಿಸಿದ್ದ ಆಸ್ಟ್ರೇಲಿಯಾ ಸದ್ಯ 82 ರನ್ಗಳ ಹಿನ್ನಡೆಯಲ್ಲಿದೆ. ಮತ್ತೊಂದು ಇನ್ನಿಂಗ್ಸ್ ಬಾಕಿ ಇರುವುದರಿಂದ 3ನೇ ಪಂದ್ಯದಲ್ಲೂ ಸುಲಭ ಜಯ ಸಾಧಿಸುವ ಉತ್ಸಾಹ ಹೊಂದಿದೆ.
ಮುಂದಿನ ದಿನಗಳಲ್ಲಿ ಭಾರತ, ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. 2024ರ ಟಿ20 ವಿಶ್ವಕಪ್ ಹಾಗೂ ಶ್ರೀಲಂಕಾ ವಿರುದ್ಧ ದ್ವಿಪಕ್ಷೀಯ ಸರಣಿ ಬಳಿಕ ಬಾಂಗ್ಲಾದೇಶ ವಿರುದ್ಧ 2 ಟೆಸ್ಟ್ ಪಂದ್ಯಗಳ ದ್ವಿಪಕ್ಷೀಯ ಸರಣಿಯನ್ನಾಡಲಿದೆ. ಆ ನಂತರ ಕಿವೀಸ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿ, 2024ರ ವರ್ಷಾಂತ್ಯದ ವೇಳೆಗೆ ಆಸೀಸ್ ವಿರುದ್ಧ 4 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ.