ಬೆಂಗಳೂರು: ಕಾಂಗ್ರೆಸ್ ಪಾದಯಾತ್ರೆ ತಡೆಯಲು ಗೃಹ ಸಚಿವರು ಇನ್ನೊಂದು ಜನ್ಮ ಹುಟ್ಟು ಬರಬೇಕು ಎಂಬ ಡಿಕೆಶಿ ಹೇಳಿಕೆಗೆ ರಾಜ್ಯ ಬಿಜೆಪಿ ಕಿಡಿಕಾರಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಜಂಟಿ ಪತ್ರಿಕಾಗೋಷ್ಠಿ ಮೂಲಕ ಸುಳ್ಳು ಪ್ರತಿಪಾದನೆಗೆ ಹೊರಟಿರುವ ರಾಜ್ಯ ಕಾಂಗ್ರೆಸ್ ಪಕ್ಷದ ಒಂಟಿ ಒಂಟಿ ನಾಯಕರೇ, ಹತ್ತಾರು ಪ್ರಶ್ನೆ ಎತ್ತುವ ಮುನ್ನ ನಮ್ಮ ಒಂದು ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆಗೆ ತಡೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಯಾರು? ಎಂದು ಪ್ರಶ್ನೆ ಮಾಡಿದೆ.
ಇನ್ನೂ ಡಿಕೆಶಿಯವರೇ, ಮೇಕೆದಾಟು ಈಗ ಸ್ಟ್ಯಾಲಿನ್ ಸರ್ಕಾರದ ಅಂಗಳದಲ್ಲಿದ್ದು ನೀವು ಸುಳ್ಳಿನಜಾತ್ರೆ ಮಾಡುವ ಬದಲು, ಅವರೊಂ ದಿಗೆ ಮಾತುಕತೆ ನಡೆಸಿ. ತಾಕತ್ತಿದ್ದರೆ ನಮ್ಮನ್ನು ಬಂಧಿಸಿ ಎಂದು ಸವಾಲು ಹಾಕುವುದು ಬೇಡ. ಪ್ರಧಾನಿ ಮೋದಿಯೋ, ರಾಹುಲ್ ಗಾಂಧಿಯೋ ಎಂದು ಸಿದ್ದರಾಮಯ್ಯ ಪ್ರಶ್ನಿಸುವುದೂ ಬೇಡ. ನೀವಿಬ್ಬರೂ ಸೇರಿ ಸ್ಟ್ಯಾಲಿನ್ ಮನವೊಲಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾದ ದಾವೆ ವಾಪಾಸ್ ತೆಗಿಸಿ ಎಂದು ಬಿಜೆಪಿ ಆಗ್ರಹಿಸಿದೆ.
