ಆನೇಕಲ್:– ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಆನೇಕಲ್ ಪಟ್ಟಣದ ದೊಡ್ಡಕೆರೆಯಲ್ಲಿ ಜರುಗಿದೆ. ಮೀನು ಹಿಡಿಯಲು ಹೋಗಿ ಕೆರೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.
ಕೆಆರ್ ನಗರ ಮಹಿಳೆಯ ಕಿಡ್ನಾಪ್ ಕೇಸ್: ಆರೋಪಿಯನ್ನು ಎಸ್ಐಟಿ ಕಚೇರಿಗೆ ಕರೆತಂದ ಅಧಿಕಾರಿಗಳು!
40 ವರ್ಷ ವಯಸ್ಸಿನ ಆಸುಪಾಸಿನಲ್ಲಿರುವ ವ್ಯಕ್ತಿಯ ಮೃತದೇಹ ಎಂದು ಗುರುತಿಸಲಾಗಿದೆ. ಕೆರೆಯಲ್ಲಿ ತೇಲುತ್ತಿದ್ದ ಶವವನ್ನ ಕಂಡು ಪೊಲೀಸರಿಗೆ ಪ್ರತ್ಯಕ್ಸದರ್ಶಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಆನೇಕಲ್ ಪೊಲೀಸರು, ಮೃತದೇಹವನ್ನ ಹೊರತೆಗೆದಿದ್ದಾರೆ. ಮೃತ ವ್ಯಕ್ತಿ ಗುರುತು ಇನ್ನೂ ಪತ್ತೆಯಾಗಿಲ್ಲ. ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.