ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ನಲ್ಲಿ ವಿಂಚ್ ಬೋಟ್ ಪ್ಯಾರಾ ಸೈಲಿಂಗ್ ಮಾಡುತ್ತಿದ್ದ ಪ್ರವಾಸಿಗ ಬಾಲಕನೋರ್ವ ಮೇಲಿನಿಂದ ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡ ಬಾಲಕನನ್ನು ಬೆಂಗಳೂರು ಮೂಲದ ಇಕ್ಷ್ಯಾನ್ ಚೌಧರಿ (12) ಎಂದು ಗುರುತಿಸಲಾಗಿದೆ. ಬಾಲಕ ಪ್ಯಾರಾ ಸೈಲಿಂಗ್ ಮಾಡುತ್ತಿದ್ದಾಗ 10 ಮೀಟರ್ ಎತ್ತರದಿಂದ ಬೋಟಿಗೆ ಬಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.
ಸರಿಯಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಹಿನ್ನಲೆಯಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು ಬಾಲಕನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಲ್ಪೆ ಬೀಚ್ ನಲ್ಲಿ ಕಳೆದ ತಿಂಗಳು ಪ್ರವಾಸಿಗರಿಗೆ ಅವಕಾಶ ನೀಡಲಾಗಿತ್ತು ಅಡ್ವೆಂಚರ್ ಚಟುವಟಿಕೆ, ದೋಣಿ ವಿಹಾರ ಆರಂಭವಾಗಿತ್ತು.
ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ನೆರವಿಗೆ ಬಾರದ ಸಹ ಪ್ರಯಾಣಿಕರು
ಆದರೆ ಈ ಕುರಿತು ಟೆಂಡರ್ ಪಡೆದಿರುವವರು ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಿಲ್ಲ ಬೋಟಿಂಗ್ ವೇಳೆಯಲ್ಲಿ ದೋಣಿಯ ಸಾಮರ್ಥ್ಯಕ್ಕಿಂತ ಅಧಿಕ ಜನರನ್ನು ಹತ್ತಿಸಿಕೊಳ್ಳಲಾಗುತ್ತಿದೆ. ನಿಯಮ ಮೀರಿ ಇಂತಹ ಚಟುವಟಿಕೆಗಳು ನಡೆಯುತ್ತಿದ್ದು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.