ಪಟನಾ:- ಬಿಹಾರದ ಮಧುಬನಿ (ಯ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆಯೊಂದು ಕುಸಿದಿದೆ. ಆ ಮೂಲಕ ಕಳೆದ 9 ದಿನದಲ್ಲಿ ಬಿಹಾರದಲ್ಲಿಯೇ 5 ಸೇತುವೆಗಳು ಕುಸಿದಂತಾಗಿದೆ.
BBMP ಮತ್ತೊಂದು ಹಗರಣ ಬಯಲು.. ನಕಲಿ ಸೊಸೈಟಿಗಳಿಗೆ 102 ಕೋಟಿ ರೂ. ವರ್ಗಾವಣೆ..!
ಭೇಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೂತಾಹಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಸೇತುವೆಯು ಕುಸಿದಿದೆ. ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. 2021ರಿಂದಲೂ ಕೇವಲ 75 ಮೀಟರ್ ಉದ್ದದ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಲೇ ಇದೆ. ಸೇತುವೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ, ಇದಕ್ಕಾಗಿಯೇ ವಿಳಂಬವಾಗುತ್ತಿದೆ ಎಂಬುದಾಗಿ ಸ್ಥಳೀಯರು ಆರೋಪಿಸುತ್ತಿದ್ದರೂ ಅಧಿಕಾರಿಗಳು ಗಮನ ಹರಿಸಿಲ್ಲ. ಈಗ ಸೇತುವೆಯು ನಿರ್ಮಾಣ ಹಂತದಲ್ಲಿಯೇ ಕುಸಿದಿರುವುದು ಜನರ ಆಕ್ರೋಶವನ್ನು ಕೆರಳಿಸಿದೆ
ಬಿಹಾರ ರಾಜ್ಯದಲ್ಲಿ ಒಂದರ ಹಿಂದೆ ಒಂದರಂತೆ ಸೇತುವೆಗಳು ಕುಸಿಯುತ್ತಿರುವುದಕ್ಕೆ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬಿಹಾರದಲ್ಲಿ ಸೇತುವೆ ಕುಸಿತದ ಪ್ರಕರಣಗಳು ಸುದ್ದಿಯಾಗುತ್ತಲೇ ಇವೆ. ಕಳೆದ 9 ದಿನಗಳಲ್ಲಿಯೇ ಇಂತಹ 5 ಪ್ರಕರಣಗಳು ಬೆಳಕಿಗೆ ಬಂದಿವೆ. ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ಸೇತುವೆ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಹಾಗೂ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಜನರ ದುಡ್ಡು ಹೀಗೆ ನೀರು ಪಾಲಾಗುತ್ತಿದ್ದರೂ ಮುಖ್ಯಮಂತ್ರಿಯು ಗಾಢ ನಿದ್ದೆಯಲ್ಲಿದ್ದಾರೆ” ಎಂಬುದಾಗಿ ಟೀಕಿಸಿದ್ದಾರೆ