ನವದೆಹಲಿ:- ಘಾಜಿಪುರದ ಬಾಬಾ ಬ್ಯಾಂಕ್ವೆಟ್ ಹಾಲ್ ಬಳಿ ಮದುವೆಗೆ ಆಮಂತ್ರಣ ಹಂಚಲು ತೆರಳಿದ್ದ ವರನ ಕಾರಿಗೆ ಬೆಂಕಿ ಹತ್ತಿಕೊಂಡ ಪರಿಣಾಮ ಕಾರು ಸುಟ್ಟು ಕರಕಲಾಗಿ, ವರ ಸಾವನ್ನಪ್ಪಿದ ಘಟನೆ ಜರುಗಿದೆ.
ಮುಡಾ ಕೇಸ್ ನಲ್ಲಿ ಇಡಿ ಸ್ಥಿರಾಸ್ತಿ ಮುಟ್ಟುಗೋಲು ಕೇಸ್: ಸಚಿವ ಪರಮೇಶ್ವರ್ ಹೇಳಿದ್ದೇನು?
ಅನಿಲ್ ಮೃತ ವರ ಎಂದು ಗುರುತಿಸಲಾಗಿದೆ. ಅನಿಲ್ ಶನಿವಾರ ಮಧ್ಯಾಹ್ನ ಆಮಂತ್ರಣ ಪತ್ರಿಕೆ ಹಂಚಲು ಹೊರಗೆ ಹೋಗಿದ್ದ ಸಂದರ್ಭ ಘಟನೆ ಸಂಭವಿಸಿದೆ. ಸಂಜೆಯಾದರೂ ವಾಪಸ್ ಬಾರದ್ದನ್ನು ಕಂಡು ಕರೆ ಮಾಡಿದೆವು. ಆದರೆ ಅವರ ಮೊಬೈಲ್ ಸ್ವಿಚ್ಆಫ್ ಆಗಿತ್ತು. ರಾತ್ರಿ 11:30ರ ಸುಮಾರಿಗೆ ಅನಿಲ್ಗೆ ಅಪಘಾತವಾಗಿದ್ದು, ಆಸ್ಪತ್ರೆಯಲ್ಲಿದ್ದಾರೆ ಎಂದು ಪೊಲೀಸರು ಕರೆ ಮಾಡಿದ್ದರು ಎಂದು ಅನಿಲ್ ಅಣ್ಣ ಸುಮಿತ್ ತಿಳಿಸಿದ್ದಾರೆ.