ಬೆಂಗಳೂರು:- ಹಾವೇರಿ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸರ್ಕಾರದ ಉಡಾಫೆ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಹಾವೇರಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದ ತನಿಖೆಗೆ ಸರ್ಕಾರ ಎಸ್ಐಟಿ ರಚನೆ ಮಾಡಬೇಕು ಎಂದರು.
ಹಾವೇರಿ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡಲು ಬಯಸುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪದೇಪದೇ ಈ ರೀತಿಯ ಘಟನೆಗಳು ಆಗುತ್ತಿವೆ. ಬೆಳಗಾವಿ ಹಾಗೂ ಹಾವೇರಿಯ ಮಹಿಳೆಯರ ಮೇಲಿನ ದೌರ್ಜನ್ಯದಂತಹ ಘಟನೆಗಳು ನಾಚಿಕೆಗೇಡಿನ ಸಂಗತಿಯಾಗಿವೆ. ಈ ತಿಂಗಳ 7ರಂದು ಈ ಘಟನೆ ನಡೆದಿದೆ. ಈಗ ಒಂದು ವಾರ ಕಳೆದರೂ ಪೊಲೀಸರು ತಲೆ ಕೆಡಿಸಿಕೊಂಡಿಲ್ಲ. ಎಫ್ಐಆರ್ ಕೂಡ ದಾಖಲಿಸಿಲ್ಲ. ಮತ್ತೊಂದು ಕಡೆ ಈ ದುರ್ಘಟನೆಯನ್ನು ಮುಚ್ಚಿ ಹಾಕುವ ಪ್ರಯತ್ನ ಆಗುತ್ತಿದೆ. ಇದು ಬೇಸರದ ಮತ್ತು ಖಂಡನೀಯ ವಿಚಾರ ಎಂದಿದ್ದಾರೆ.
ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಇದು ಗಂಭೀರವಾದ ವಿಚಾರವಾಗಿದ್ದು, ಇದನ್ನು ರಾಜ್ಯ ಸರ್ಕಾರ ಹಗುರವಾಗಿ ಪರಿಗಣಿಸಿದೆ. ಪೊಲೀಸರು ರಾಜ್ಯ ಕಾಂಗ್ರೆಸ್ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ದುರ್ದೈವದ ಸಂಗತಿಯಾಗಿದೆ